Home Uncategorized ಪತಿಯ ಸಾವಿನಿಂದ ಮಾನಸಿಕ ಖಿನ್ನತೆ, ಮಗನ ಜೊತೆಗೆ ಕೆರೆಗೆ ಹಾರಿದ ಮಹಿಳೆ!

ಪತಿಯ ಸಾವಿನಿಂದ ಮಾನಸಿಕ ಖಿನ್ನತೆ, ಮಗನ ಜೊತೆಗೆ ಕೆರೆಗೆ ಹಾರಿದ ಮಹಿಳೆ!

8
0
Advertisement
bengaluru

ಪತಿಯ ಸಾವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಏಳು ವರ್ಷದ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಗರದ ಹೊರವಲಯದ ಬನ್ನೇರುಘಟ್ಟ ಸಮೀಪದ ಸಕಲವಾರ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ. ಬೆಂಗಳೂರು: ಪತಿಯ ಸಾವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಏಳು ವರ್ಷದ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಗರದ ಹೊರವಲಯದ ಬನ್ನೇರುಘಟ್ಟ ಸಮೀಪದ ಸಕಲವಾರ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ.

ಮೃತರನ್ನು ಆಂಧ್ರಪ್ರದೇಶ ಮೂಲದ ಬನ್ನೇರುಘಟ್ಟದ ​​ಸಿಕೆ ಪಾಳ್ಯ ನಿವಾಸಿಗಳಾದ ವಿಜಯಲಕ್ಷ್ಮಿ (39) ಮತ್ತು ಹರಿಹರನ್ ಎಂದು ಗುರುತಿಸಲಾಗಿದೆ.

ಎರಡು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ತನ್ನ ಪತಿ ಗಣೇಶನನ್ನು ಕಳೆದುಕೊಂಡಿದ್ದ ಲಕ್ಷ್ಮಿ, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು  ಪೊಲೀಸರು ತಿಳಿಸಿದ್ದಾರೆ. ಶನಿವಾರ ಮಗನನ್ನು ತನ್ನ ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿರುವುದಾಗಿ  ಎಂದು ಅವರು ತಿಳಿಸಿದ್ದಾರೆ. ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.


bengaluru

LEAVE A REPLY

Please enter your comment!
Please enter your name here