Home Uncategorized ಪಶ್ಚಿಮ, ದಕ್ಷಿಣ ವಲಯಗಳಲ್ಲಿಯೂ ಇ-ಆಸ್ತಿ ತಂತ್ರಾಂಶ ಅಳವಡಿಸಲು ಕ್ರಮ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

ಪಶ್ಚಿಮ, ದಕ್ಷಿಣ ವಲಯಗಳಲ್ಲಿಯೂ ಇ-ಆಸ್ತಿ ತಂತ್ರಾಂಶ ಅಳವಡಿಸಲು ಕ್ರಮ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

15
0
Advertisement
bengaluru

ಬೆಂಗಳೂರು ಪೂರ್ವದಲ್ಲಿ ಆರಂಭವಾಗಿರುವ ‘ಇ-ಅಸ್ತಿ’ ತಂತ್ರಾಂಶವನ್ನು ಪಶ್ಚಿಮ, ದಕ್ಷಿಣ ವಲಯಗಳಲ್ಲಿಯೂ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಗುರುವಾರ ಹೇಳಿದರು. ಬೆಂಗಳೂರು: ಬೆಂಗಳೂರು ಪೂರ್ವದಲ್ಲಿ ಆರಂಭವಾಗಿರುವ ‘ಇ-ಅಸ್ತಿ’ ತಂತ್ರಾಂಶವನ್ನು ಪಶ್ಚಿಮ, ದಕ್ಷಿಣ ವಲಯಗಳಲ್ಲಿಯೂ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಗುರುವಾರ ಹೇಳಿದರು.

ನಿನ್ನೆಯಷ್ಟೇ ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ ರಾಯ್ಪುರ ಅವರು ಪ್ರಸಕ್ತ ಸಾಲಿನ ಬಿಬಿಎಂಪಿ ಬಜೆಟ್’ನ್ನು ಮಂಡನೆ ಮಾಡಿದರು.

ಬಜೆಟ್ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ ತುಷಾರ್ ಗಿರಿನಾಥ್ ಅವರು, ಆಸ್ತಿ ತೆರಿಗೆ ಹೆಚ್ಚಳ ಮಾಡಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಖಾತಾ ಮೇಳ ನಡೆಸಲಾಗುತ್ತಿದೆ. ಕ್ರಯ ಪತ್ರ ನೋಂದಣಿಗೆ ಅವಕಾಶ ಮಾಡಿಕೊಡುವುದಕ್ಕಾಗಿ ನಗರದ ಪೂರ್ವ, ಪಶ್ಚಿಮ ಹಾಗೂ ದಕ್ಷಿಣ ವಲಯಗಳಲ್ಲಿ ಇ – ಆಸ್ತಿ ತಂತ್ರಾಂಶ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಬಿ ಖಾತೆಯ ನಿವೇಶನಗಳಿಗೆ ಎ ಖಾತೆ ನೀಡುವ ಯೋಜನೆ ವರ್ಷಾಂತ್ಯದಲ್ಲಿ ತೆಗೆದುಕೊಳ್ಳಲಾಗಿದೆ. ಇದರಿಂದ ಪಾಲಿಕೆಗೆ ಈ ವರ್ಷ 300 ಕೋಟಿ ರೂ ಆದಾಯ ಬರುವ ನಿರೀಕ್ಷೆಯಿದೆ. 2023-24ನೇ ವರ್ಷದಲ್ಲಿ 800 ಕೋಟಿ ರೂ ಆದಾಯ ನಿರೀಕ್ಷೆಯಿದೆ ಎಂದು ತಿಳಿಸಿದರು.

bengaluru bengaluru

ಬಳಿಕ ಮಾತನಾಡಿ ಜಯರಾಮ್ ರಾಯ್ಪರ ಅವರು, 2022ರಲ್ಲಿ 3,758 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ರೂ.4,412 ಕೋಟಿ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ. ಆಸ್ತಿ ತೆರಿಗೆ ಸಂಗ್ರಹದಲ್ಲಿ 24 ಶೇಕಡಾರಷ್ಟು ಹೆಚ್ಚಳವಾಗಿದ್ದು, ನಮ್ಮ ಗುರಿಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಇದೀಗ ಶೇ.27ರಷ್ಟು ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.

243 ವಾರ್ಡ್ ಗಳು ರಚನೆಯಾಗಿದ್ದು, ನಾಗರೀಕ ಕಾಮಗಾರಿಗೆ ಪ್ರತಿ ವಾರ್ಡ್ ಗೆ 2 ಕೋಟಿ ರೂಪಾಯಿಯನ್ನು ನೀಡಲಾಗಿದೆ. ಬಿಬಿಎಂಪಿಯೊಂದಿಗೆ ವಿಲೀನಗೊಂಡ 110 ಗ್ರಾಮಗಳಿಗೆ ರೂ.300 ಕೋಟಿ ಮೀಸಲಿಡಸಲಾಗಿದೆ ಎಂದು ತಿಳಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here