Home Uncategorized ಪಿಆರ್‌ಆರ್‌ ಅನುಷ್ಠಾನ, ವೈಟ್ ಟಾಪಿಂಗ್ ಸ್ಥಿತಿಗತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ

ಪಿಆರ್‌ಆರ್‌ ಅನುಷ್ಠಾನ, ವೈಟ್ ಟಾಪಿಂಗ್ ಸ್ಥಿತಿಗತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ

13
0
Advertisement
bengaluru

ಏಪ್ರಿಲ್-ಮೇ ನಡುವೆ ರಾಜ್ಯ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಚುನಾವಣೆಗೂ ಮುನ್ನ ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳ ನಡೆಸುತ್ತಿದ್ದಾರೆ. ಈ ನಡುವಲ್ಲೇ ಮುಖ್ಯಮಂತ್ರಿಗಳು ಸೋಮವಾರ ಸಂಜೆ ಪೌರಾಡಳಿತ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಆಂತರಿಕ ಸಭೆ ನಡೆಸಿದ್ದು, ಪಿಆರ್‌ಆರ್‌ ಅನುಷ್ಠಾನ, ವೈಟ್ ಟಾಪಿಂಗ್ ಸ್ ಬೆಂಗಳೂರು: ಏಪ್ರಿಲ್-ಮೇ ನಡುವೆ ರಾಜ್ಯ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಚುನಾವಣೆಗೂ ಮುನ್ನ ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳ ನಡೆಸುತ್ತಿದ್ದಾರೆ. ಈ ನಡುವಲ್ಲೇ ಮುಖ್ಯಮಂತ್ರಿಗಳು ಸೋಮವಾರ ಸಂಜೆ ಪೌರಾಡಳಿತ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಆಂತರಿಕ ಸಭೆ ನಡೆಸಿದ್ದು, ಪಿಆರ್‌ಆರ್‌ ಅನುಷ್ಠಾನ, ವೈಟ್ ಟಾಪಿಂಗ್ ಸ್ಥಿತಿಗತಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ನೆಲಮಂಗಲದ ಪೆರಿಫೆರಲ್ ರಿಂಗ್ ರಸ್ತೆ ಮತ್ತು ನೈಸ್ ರಸ್ತೆಯಲ್ಲಿ ಹಾದು ಹೋಗುವ ಎಲೆಕ್ಟ್ರಾನಿಕ್ಸ್ ಸಿಟಿ ಕುರಿತು ಸಭೆಯಲ್ಲಿ ಮುಖ್ಯಮಂತ್ರಿಗಳು ಚರ್ಚೆ ನಡೆಸಿದರು.

ಭೂಸ್ವಾಧೀನ ವಿಚಾರದಲ್ಲಿ ಗೊಂದಲ ಉಂಟಾಗಿ ಯೋಜನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಸರ್ಕಾರದ ಉಪ ಮುಖ್ಯ ಕಾರ್ಯದರ್ಶಿಗಳು, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆಎ ದಯಾನಂದ್ ಮತ್ತು ಕರ್ನಾಟಕ ಸ್ಟಾರ್ಟ್ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಅವರಿಗೆ ಮುಖ್ಯಮಂತ್ರಿಗಳು ಸಮನ್ಸ್ ಜಾರಿ ಮಾಡಿದ್ದಾರೆ.

ಯೋಜನೆಯನ್ನು ಪೂರ್ಣಗೊಳಿಸಲು ಪರಿಸ್ಥಿತಿ ಮತ್ತು ವಿಷಯಗಳನ್ನು ಸರಿಯಾಗಿ ಹೊಂದಿಸುವ ಮಾರ್ಗ ಕಂಡುಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಅವರು ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.

bengaluru bengaluru

ಭೂಸ್ವಾಧೀನ ಕಾಯ್ದೆ 2013 ಅಥವಾ ಹಿಂದಿನ ಕಾಯಿದೆಗಳ ಮೂಲಕ ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದು,  ಬಬಿಎಂಪಿಯ ವೈಟ್ ಟಾಪಿಂಗ್ ಯೋಜನೆಯ ಪ್ರಗತಿಯ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಆದರೆ, ಬಜೆಟ್‌ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎನ್ನಲಾಗಿದೆ.


bengaluru

LEAVE A REPLY

Please enter your comment!
Please enter your name here