ಬೆಂಗಳೂರು:
ರಾಜರಾಜೇಶ್ವರಿ ನಗರ ವಿಧಾನಸಭೆಯ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ನಟ ದರ್ಶನ್ ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಪ್ರಕರಣ ದಾಖಲಿಸಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ಚುನಾಣಾಧಿಕಾರಿ ಮತ್ತು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್, ದರ್ಶನ್ ಮತ್ತು ಇತರರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದರು.
ದರ್ಶನ್ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ಸಂಗ್ರಹಿಸಿರುವ ವಿಡಿಯೋಗಳು ಮತ್ತು ಚಿತ್ರಗಳನ್ನು ಪೊಲೀಸರಿಗೆ ಸಲ್ಲಿಸಲಾಗಿದೆ ಎಂದು ಹೇಳಿದರು.