Home Uncategorized ಪ್ರಬಲ ಭೂಕಂಪಕ್ಕೆ ತತ್ತರಿಸಿದ ಟರ್ಕಿ: ಸಂತ್ರಸ್ತರಿಗೆ ನೆರವು ನೀಡಲು ಭಾರತ ಸಿದ್ಧ ಎಂದ ಪ್ರಧಾನಿ ಮೋದಿ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಟರ್ಕಿ: ಸಂತ್ರಸ್ತರಿಗೆ ನೆರವು ನೀಡಲು ಭಾರತ ಸಿದ್ಧ ಎಂದ ಪ್ರಧಾನಿ ಮೋದಿ

14
0
bengaluru

ಪ್ರಬಲ ಭೂಕಂಪಕ್ಕೆ ಟರ್ಕಿ ತತ್ತರಿಸಿ ಹೋಗಿದ್ದು, ಭೂಕಂಪ ಸಂತ್ರಸ್ತರಿಗೆ ಅಗತ್ಯ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ. ಬೆಂಗಳೂರು: ಪ್ರಬಲ ಭೂಕಂಪಕ್ಕೆ ಟರ್ಕಿ ತತ್ತರಿಸಿ ಹೋಗಿದ್ದು, ಭೂಕಂಪ ಸಂತ್ರಸ್ತರಿಗೆ ಅಗತ್ಯ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.

ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ)ದಲ್ಲಿ ಭಾರತ ಇಂಧನ ಸಪ್ತಾಹ–2023ಕ್ಕೆ ಚಾಲನೆ ನೀಡಿದ ಮಾತನಾಡಿದ ಅವರು, ಟರ್ಕಿಯಲ್ಲಿ ಸಂಭವಿಸಿದ ವಿನಾಶಕಾರಿ ದುರಂತದ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದರು.

ಭೂಕಂಪ ಸಂತ್ರಸ್ತರಿಗೆ ಭಾರತವು ಸಾಧ್ಯವಾಗುವ ಎಲ್ಲ ರೀತಿಯಲ್ಲಿಯೂ ನೆರವು ನೀಡಲಿದೆ ಎಂದು ಭರವಸೆ ನೀಡಿದರು.

ಟರ್ಕಿಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪವನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಹಲವಾರು ಜನರ ಸಾವು ಹಾಗೂ ಹಾನಿಗಳು ವರದಿಯಾಗಿವೆ. ಟರ್ಕಿಯ ಸಮೀಪವಿರುವ ದೇಶಗಳಲ್ಲಿಯೂ ಕೂಡ ಹಾನಿ ಸಂಭವಿಸಿದೆ. ಭೂಕಂಪ ಪೀಡಿತ ಸಂತ್ರಸ್ತರ ಜೊತೆಗೆ ಭಾರತದ 140 ಕೋಟಿ ಜನರ ಸಹಾನುಭೂತಿಯಿದೆ. ಭಾರತೀಯರು ಭೂಕಂಪ ಪೀಡಿತ ಜನರೊಂದಿಗೆ ಇದ್ದಾರೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ಧವಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here