ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ PFI ಕಾರ್ಯಕರ್ತರ ಪತ್ತೆಗೆ 5 ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ. ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ PFI ಕಾರ್ಯಕರ್ತರ ಪತ್ತೆಗೆ 5 ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ಆರೋಪಿಗಳ ಪತ್ತೆಗೆ ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಿದ್ದು, ಇದೀಗ ಆರು ಆರೋಪಿಗಳ ಪತ್ತೆಗೆ ಒಟ್ಟು 19 ಲಕ್ಷ ರೂಪಾಯಿ ಇನಾಮು ಘೋಷಣೆ ಮಾಡಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಐಎಸ್ಐಎಸ್ ಚಟುವಟಿಕೆ ಪ್ರಕರಣ: ಮಂಗಳೂರು ವಿದ್ಯಾರ್ಥಿ ಸೇರಿ ಇಬ್ಬರು ಎನ್ಐಎ ವಶಕ್ಕೆ
ಏತನ್ಮಧ್ಯೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ಪತ್ತೆಗೆ ತಲಾ 5 ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಎಂಬವರ ಮಗ ಮೊಹಮ್ಮದ್ ಷರೀಫ್(53)- 5 ಲಕ್ಷ ಹಾಗೂ ನೆಕ್ಕಿಲಾಡಿಯ ಅಗ್ನಾಡಿ ಹೌಸ್ ನ ಅಬೂಬಕರ್ ಮಗ ಮಸೂದ್ ಕೆ.ಎ (40)-5 ಲಕ್ಷ ಒಟ್ಟು 10 ಲಕ್ಷ ಬಹುಮಾನವನ್ನು ಎನ್‍ಐಎ ಘೋಷಿಸಿದೆ. ಆರೋಪಿಗಳ ಸುಳಿವು ಪತ್ತೆಯಾದರೆ ಬೆಂಗಳೂರಿನ ದೊಮ್ಮಲೂರು ಬಳಿ ಇರುವ ಎನ್‍ಐಎ ಎಸ್‍ಪಿಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್ಐಎ
ಏನಿದು ಘಟನೆ?
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26ರ ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೂ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.