Home Uncategorized ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್ಐಎಯಿಂದ ಮೊತ್ತೋರ್ವ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್ಐಎಯಿಂದ ಮೊತ್ತೋರ್ವ ಆರೋಪಿ ಬಂಧನ

11
0
bengaluru

ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಬಂಧಿತ ಆರೋಪಿಯನ್ನು ತೌಫೀಲ್​ ಎಂದು ಗುರ್ತಿಸಲಾಗಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ನಗರದ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಎನ್ಐಎ ಅಧಿಕಾರಿಗಳು ಆರೋಪಿ ಪತ್ತೆಗೆ ಈ ಹಿಂದೆ ರೂ. 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ನಿನ್ನೆ ಖಚಿತ ಮಾಹಿತಿ ಮೇರೆಗೆ ಸುಮಾರು 10ಕ್ಕೂ ಹೆಚ್ಚು ಎನ್​ಐಎ ಅಧಿಕಾರಿಗಳು ತೌಫಿಲ್ ಮನೆ ಬಳಿಗೆ ಹೋಗಿದ್ದಾರೆ. ನಂತರ ಇಬ್ಬರು ಅಧಿಕಾರಿಗಳು ಫ್ಲಂಬರ್ ಅಂತ ಕೈಯಲ್ಲಿ ರಿಂಚ್ ಹಿಡಿದು ಮನೆ ಒಳಗೆ ಹೋಗಿದ್ದಾರೆ. ಈ ವೇಳೆ ತೌಫಿಲ್ ಮಟನ್​ ಕತ್ತರಿಸುತ್ತಿರುವುದು ಕಂಡುಬಂದಿದೆ.

ನಂತರ ಮತ್ತಿಬ್ಬರು ಒಳಗೆ ಬಂದಿದ್ದನ್ನು ನೋಡಿದ ತೌಘಿಲ್​​, ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಇದನ್ನು ತಿಳಿದ ಉಳಿದ ಅಧಿಕಾರಿಗಳು ಏಕಕಾಲಕ್ಕೆ ಒಳಗೆ ಬಂದು ತೌಘಿಲ್​ನನ್ನು ಲಾಕ್​ ಮಾಡಿ, ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಪ್ರವೀಣ್ ನೆಟ್ಟಾರುನನ್ನು ಜುಲೈ 26 ರಂದು ಆತನ ಕೋಳಿ ಅಂಗಡಿಗೆ ನುಗ್ಗಿ ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದರು. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದರು.

LEAVE A REPLY

Please enter your comment!
Please enter your name here