Home Uncategorized ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ ಎನ್ಐಎ

ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ ಎನ್ಐಎ

4
0
bengaluru

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ಶುಕ್ರವಾರ 20 ಆರೋಪಿಗಳ ವಿರುದ್ಧ 1500 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.  ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ಶುಕ್ರವಾರ 20 ಆರೋಪಿಗಳ ವಿರುದ್ಧ 1500 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. 

ಎನ್​ಐಎ ಅಧಿಕಾರಿಗಳು ಇಂದು ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಸುದೀರ್ಘ 1500 ಪುಟಗಳ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. 240 ಸಾಕ್ಷಿಗಳ ಹೇಳಿಕೆಗಳು ಸೇರಿ ಒಟ್ಟು 20 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ.

ಇದನ್ನು ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಪತ್ತೆಗೆ 5 ಲಕ್ಷ ರೂ ಬಹುಮಾನ ಘೋಷಣೆ ಮಾಡಿದ NIA

ಇನ್ನು ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

bengaluru

ತಲೆಮರೆಸಿಕೊಂಡಿರುವ 6 ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿರುವ ಎನ್​ಐಎ ಅಧಿಕಾರಿಗಳು, ಪತ್ತೆಯಾಗದ ಹಿನ್ನಲೆಯಲ್ಲಿ ಲುಕ್​ಔಟ್​ ನೋಟಿಸ್ ಜಾರಿ ಮಾಡಿದೆ. ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

bengaluru

LEAVE A REPLY

Please enter your comment!
Please enter your name here