Home Uncategorized ಫೆಬ್ರವರಿ ತಿಂಗಳಲ್ಲಿ ರಾಜ್ಯ ಸರ್ಕಾರದ ಬಜೆಟ್: ಸಿಎಂ ಬೊಮ್ಮಾಯಿ

ಫೆಬ್ರವರಿ ತಿಂಗಳಲ್ಲಿ ರಾಜ್ಯ ಸರ್ಕಾರದ ಬಜೆಟ್: ಸಿಎಂ ಬೊಮ್ಮಾಯಿ

21
0

2023-24ನೇ ಸಾಲಿನ ರಾಜ್ಯ ಬಜೆಟ್ ಅನ್ನು 2023ರ ಫೆಬ್ರವರಿ ತಿಂಗಳಿನಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು. ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಅನ್ನು 2023ರ ಫೆಬ್ರವರಿ ತಿಂಗಳಿನಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

ಶಿಗ್ಗಾಂವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಈಗಾಗಲೇ ಎರಡು ಸುತ್ತಿನ ಮಾತುಕತೆ ನಡೆಸಲಾಗಿದೆ. “ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಮುಗಿದ ನಂತರ, ಸಂಬಂಧಿಸಿದ ಎಲ್ಲಾ ಇಲಾಖೆಗಳು, ಸಂಸ್ಥೆಗಳು ಮತ್ತು ಸಂಘಗಳೊಂದಿಗೆ ಚರ್ಚೆ ನಡೆಸಲಾಗುವುದು” ಎಂದು ಹೇಳಿದರು.

ಮಾರ್ಚ್ 4, 2022 ರಂದು 2.65 ಲಕ್ಷ ಕೋಟಿ ರೂ ಬಜೆಟ್‌ ಮಂಡನೆ ಮಾಡಿದ್ದರು. 2023-24 ರಲ್ಲಿ ಹಣಹೂಡಿಕೆಯು ಶೇಕಡಾ 10 ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಇನ್ನು ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಸಕ್ತ ಸಾಲಿನ ಕೊನೆಯ ಬಜೆಟ್ ಇದಾಗಿದೆ.

ಈಗಾಗಲೇ ಮುಖ್ಯಮಂತ್ರಿಗಳು ಮಹಿಳೆಯರು, ಕಾರ್ಮಿಕ ವರ್ಗ ಮತ್ತು ಎಸ್‌ಸಿ/ಎಸ್‌ಟಿ/ಒಬಿಸಿಗಳಿಗೆ ಪರಿಹಾರವನ್ನು ಘೋಷಿಸಿದ್ದು, ಬಜೆಟ್ ನಲ್ಲಿ ಈ ವರ್ಗಕ್ಕೆ ಮತ್ತಷ್ಟು ಯೋಜನೆಗಳು ಘೋಷಣೆಗಳಾಗುವ ಸಾಧ್ಯತೆಗಳಿವೆ.

ರೈತರ ಮಕ್ಕಳಿಗೆ ನೀಡುತ್ತಿರುವ ‘ರೈತ ವಿದ್ಯಾನಿಧಿ’ ಶಿಷ್ಯವೇತನವನ್ನು ಈಗ ನೇಕಾರರು, ಕುಂಬಾರರು ಸೇರಿದಂತೆ ಇತರೆ ಕಾರ್ಮಿಕ ವರ್ಗದ ಮಕ್ಕಳಿಗೂ ವಿಸ್ತರಿಸಲಾಗಿದೆ. ‘ಯಶಸ್ವಿನಿ’ ಆರೋಗ್ಯ ಯೋಜನೆ ಜಾರಿಗೊಳಿಸಲು ಹಣ ಹಂಚಿಕೆಗೂ ಆದ್ಯತೆ ನೀಡಲಾಗುತ್ತಿದೆ. ಇದಲ್ಲದೆ, ನೀರಾವರಿ ಯೋಜನೆಗಳಿಗೆ ಈ ಬಾರಿಯ ಬಜೆಟ್ ನಲ್ಲಿ ಉತ್ತೇಜನ ಸಿಗುವ ಸಾಧ್ಯತೆಗಳಿವೆ. ಪ್ರಮುಖವಾಗಿ ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಗೆ ಉತ್ತೇಜನ ಸಿಗುವ ಸಾಧ್ಯತೆಗಳು ಹೆಚ್ಚಾಗಿವೆ. ಏಕೆಂದರೆ ಕಳೆದ ಬಾರಿ 50,000 ಕೋಟಿ ರೂ.ಗಳ ಅಗತ್ಯವಿದ್ದಲ ಯೋಜನೆಗೆ 5,000 ಕೋಟಿ ರೂ.ಗಳ ಹಂಚಿಕೆ ಮಾಡಲಾಗಿತ್ತು. ಸರ್ಕಾರದ ಈ ನಡೆಗೆ ಉತ್ತರ ಕರ್ನಾಟಕದ ಜನರು ಸಂತಸಗೊಂಡಿರಲಿಲ್ಲ.

ಅವಧಿಪೂರ್ವ ಚುನಾವಣೆಯಿಲ್ಲ: ಸಿಎಂ

ಅವಧಿಪೂರ್ವ ಚುನಾವಣೆ ನಡೆಸುವ ಯೋಚನೆ ಸರ್ಕಾರಕ್ಕಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಅನಿಶ್ಚಿತತೆಯನ್ನು ಎದುರಿಸುತ್ತಿದ್ದು, ಪಕ್ಷದಲ್ಲಿ ಒಳಜಗಳ ತಾರಕಕ್ಕೇರಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

LEAVE A REPLY

Please enter your comment!
Please enter your name here