Home Uncategorized ಫೆ. 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್‌: ಸಿದ್ಧತೆ ಆರಂಭಿಸಿದ ಸಿಎಂ ಬೊಮ್ಮಾಯಿ

ಫೆ. 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್‌: ಸಿದ್ಧತೆ ಆರಂಭಿಸಿದ ಸಿಎಂ ಬೊಮ್ಮಾಯಿ

17
0
Advertisement
bengaluru

ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಬಜೆಟ್‌ಗೆ ಸಿದ್ಧತೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕಲಬುರ್ಗಿಗೆ ಭೇಟಿ ನೀಡಿದ ಮರುದಿನನೇ ಅಂದರೆ ಜನವರಿ 20 ರಿಂದ ಇಲಾಖಾ ಮುಖ್ಯಸ್ಥರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಣಿ ಸಭೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗಲೇ ರಾಜ್ಯ ಸರ್ಕಾರ ಬಜೆಟ್ ಮಂಡನೆ ಮಾಡಲು ಮುಂದಾಗಿದ್ದು, ಇದು ಪ್ರಸ್ತುತ ಸರ್ಕಾರ ಕೊನೆಯ ಬಜೆಟ್ ಆಗಿರಲಿದೆ. ಹೀಗಾಗಿ ಮತದಾರರನ್ನು ಓಲೈಸಲು ಮುಖ್ಯಮಂತ್ರಿಗಳು ಹಲವು ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ.

ಬೊಮ್ಮಾಯಿ ಅವರು ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ನೀರಾವರಿ ಯೋಜನೆಗಳತ್ತ ಹೆಚ್ಚಿನ ಗಮನ ಹರಿಸಲಿದ್ದಾರೆ, ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಯೋಜನೆಗಳನ್ನು ಅವರು ಘೋಷಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

bengaluru bengaluru

ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ,  2023-24ರ ಬಜೆಟ್‌ನ ಪ್ರಾಥಮಿಕ ಸುತ್ತಿನ ಸಭೆಗಳು ಈಗಾಗಲೇ ಮುಗಿದಿವೆ. ಫೆಬ್ರವರಿ 20 ರ ನಂತರ, ಮುಖ್ಯಮಂತ್ರಿ ಅವರು ಬೆಂಗಳೂರಿನಲ್ಲಿದ್ದಾಗಲೆಲ್ಲಾ ಪ್ರತಿದಿನ ಸಭೆಗಳನ್ನು ನಡೆಸುತ್ತಾರೆಂದು ಹೇಳಿದ್ದಾರೆ.

ಕೋವಿಡ್ ನಂತರದ, ಅಬಕಾರಿ ಇಲಾಖೆ ಸೇರಿದಂತೆ ತೆರಿಗೆ ಸಂಗ್ರಹಣೆಗಳು ಗಮನಾರ್ಹವಾಗಿ ಹೆಚ್ಚಾದ ಕಾರಣ, ಬೊಮ್ಮಾಯಿ ಅವರು ಈ ಬಾರಿ ಅನೇಕ ಹೊಸ ಯೋಜನೆಗಳನ್ನು ಘೋಷಿಸಲಿದ್ದು, ಈ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ಗಾತ್ರವು ದೊಡ್ಡದಾಗಿರಲಿದೆ ಎಂದು ಹೇಳಲಾಗುತ್ತಿದೆ.


bengaluru

LEAVE A REPLY

Please enter your comment!
Please enter your name here