ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬಿಜೆಪಿ ಹೈಕಮಾಂಡ್ ನಾಯಕರು ಹೆಚ್ಚು ಭೇಟಿ ನೀಡುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಫೆ.20 ರಂದು ಶೃಂಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಳೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬಿಜೆಪಿ ಹೈಕಮಾಂಡ್ ನಾಯಕರು ಹೆಚ್ಚು ಭೇಟಿ ನೀಡುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಫೆ.20 ರಂದು ಶೃಂಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ.
ಫೆ.20 ರಂದು ರಾತ್ರಿ ಶೃಂಗೇರಿಯಲ್ಲಿ ತಂಗಲಿರುವ ಜೆಪಿ ನಡ್ಡಾ, ಶಾರದಾಂಬೆಯ ದರ್ಶನದ ಬಳಿಕ ಜಗದ್ಗುರುಗಳನ್ನು ಭೇಟಿ ಮಾಡಲಿದ್ದಾರೆ.
ಜಗದ್ಗುರುಗಳ ಭೇಟಿಗೆ ಜೆಪಿ ನಡ್ಡಾ 20 ನಿಮಿಷಗಳ ಕಾಲಾವಕಾಶ ಕೋರಿದ್ದಾರೆ. ಶೃಂಗೇರಿ ಮಠದ ಮೇಲೆ ದಾಳಿ ಮಾಡಿದ ಪೇಶ್ವೆ ಸಮುದಾಯಕ್ಕೆ ಸಂಬಂಧಪಟ್ಟವರನ್ನು ಬಿಜೆಪಿ ರಾಜ್ಯದಲ್ಲಿ ಸಿಎಂ ಮಾಡಲು ಹೊರಟಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಜೆಪಿ ನಡ್ಡಾ ಶೃಂಗೇರಿಗೆ ಭೇಟಿ ನೀಡಿ ಜಗದ್ಗುರುಗಳೊಂದಿಗೆ ಮಾತನಾಡಲು ಮುಂದಾಗಿರುವುದು ಕುತೂಹಲ ಮೂಡಿಸಿದೆ.