Home Uncategorized ಫೆ.24ರಿಂದ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಫೆ.24ರಿಂದ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

27
0

ಕಲಬುರಗಿಯಲ್ಲಿ ಫೆ.24ರಿಂದ ಫೆ.26ರವರೆಗೆ ಮೂರು ದಿನಗಳ ಕಲ್ಯಾಣ ಕರ್ನಾಟಕ ಉತ್ಸವ ಆಯೋಜಿಸಲು ಭರದ ಸಿದ್ಧತೆ ನಡೆದಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರು ಶುಕ್ರವಾರ ಹೇಳಿದರು. ಕಲಬುರಗಿ: ಕಲಬುರಗಿಯಲ್ಲಿ ಫೆ.24ರಿಂದ ಫೆ.26ರವರೆಗೆ ಮೂರು ದಿನಗಳ ಕಲ್ಯಾಣ ಕರ್ನಾಟಕ ಉತ್ಸವ ಆಯೋಜಿಸಲು ಭರದ ಸಿದ್ಧತೆ ನಡೆದಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರು ಶುಕ್ರವಾರ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ದತ್ತಾತ್ರೇಯ ಪಾಟೀಲ ರೇವೂರ ಅವರು ಉತ್ಸವದ ಪೋಸ್ಟರ್, ಲೋಗೋ, ಪ್ರೋಮೋ ಮತ್ತು ವೆಬ್‌ಸೈಟ್ ಬಿಡುಗಡೆ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರನ್ನು ಆಹ್ವಾನಿಸಲಾಗುವುದು. ಉತ್ಸವದಲ್ಲಿ ಭಾಗವಹಿಸುವಂತೆ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಅವರಿಗೂ ಆಹ್ವಾನ ನೀಡಲಾಗಿದೆ. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಅವರು ಉತ್ಸವದಲ್ಲಿ ಪಾಲ್ಗೊಳ್ಳಲು ಒಪ್ಪಿಗೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಫೆಬ್ರವರಿ 24 ರಂದು ಸಂಜೆ 4 ಗಂಟೆಗೆ ಗುಲ್ಬರ್ಗ ವಿಶ್ವವಿದ್ಯಾಲಯದ ಆವರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೂರು ದಿನಗಳ ಉತ್ಸವದ ಪ್ರಮುಖ ಕಾರ್ಯಕ್ರಮಗಳಿಗೆ ಭವ್ಯವಾದ ವೇದಿಕೆಯನ್ನು ಸಿದ್ಧಪಡಿಸಲಾಗುವುದು. ಗುಲ್ಬರ್ಗ ವಿಶ್ವವಿದ್ಯಾಲಯದ ಆವರಣದಲ್ಲಿ 3 ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲಾಗುವುದು. ಬಾಲಿವುಡ್ ಮತ್ತು ಸ್ಯಾಂಡಲ್‌ವುಡ್‌ನ ಖ್ಯಾತ ಕಲಾವಿದರು ಮತ್ತು ಖ್ಯಾತ ಗಾಯಕರು ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಅಪ್ಪನ ಕೆರೆಯಲ್ಲಿ ಜಲ ಕ್ರೀಡೆ ಹಾಗೂ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಹೆಲಿ ರೈಡ್ ನಡೆಯಲಿದೆ ಎಂದು ತಿಳಿಸಿದರು.

ಉತ್ಸವದಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಸಾರ್ವಜನಿಕರು kalyanakarnataka.utsava.com ವೆಬ್‌ಸೈಟ್‌ನಲ್ಲಿ ನೋಡಬಹುದು ಎಂದು ಕೆಕೆಆರ್‌ಡಿಬಿ ಕಾರ್ಯದರ್ಶಿ ಅನಿರುದ್ಧ್ ಶ್ರವಣ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here