Home Uncategorized ಫೆ.6ಕ್ಕೆ ಬೆಂಗಳೂರು, ತುಮಕೂರಿಗೆ ಪ್ರಧಾನಿ ಮೋದಿ ಭೇಟಿ

ಫೆ.6ಕ್ಕೆ ಬೆಂಗಳೂರು, ತುಮಕೂರಿಗೆ ಪ್ರಧಾನಿ ಮೋದಿ ಭೇಟಿ

7
0
bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರುವರಿ 6ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರುವರಿ 6ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆಂದು ತಿಳಿದುಬಂದಿದೆ.

ಫೆ. 6ರಂದು ಬೆಳಿಗ್ಗೆ ಬೆಂಗಳೂರಿಗೆ ಆಗಮಿಸುವ ಪ್ರಧಾನಿ ಮೋದಿಯವರು, ಮಾದಾವರ ಸಮೀಪದ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ‘ಇಂಡಿಯಾ ಎನರ್ಜಿ ವೀಕ್‌’ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಂತರ ತುಮಕೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ತುಮಕೂರಿನಿಂದ ಗುಬ್ಬಿ ತಾಲ್ಲೂಕಿನ ಬಿದೇರಹಳ್ಳಿಯಲ್ಲಿ ಎಚ್‌ಎಎಲ್‌ನ ಹೆಲಿಕಾಪ್ಟರ್‌ ಉತ್ಪಾದನಾ ಕಾರ್ಖಾನೆಯನ್ನು ಉದ್ಘಾಟಿಸುವರು.

ಜಲಜೀವನ್‌ ಮಿಷನ್‌ ಯೋಜನೆಯಡಿ ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರು ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ನೀರು ಪೂರೈಸುವ ಯೋಜನೆಗಳ ಕಾಮಗಾರಿಗಳಿಗೆ ಅದೇ ಸ್ಥಳದಿಂದ ಭೂಮಿಪೂಜೆ ನೆರವೇರಿಸಲಿದ್ದಾರೆಂದು ತಿಳಿದುಬಂದಿದೆ.

bengaluru
bengaluru

LEAVE A REPLY

Please enter your comment!
Please enter your name here