Home Uncategorized ಬಂಡೀಪುರದಲ್ಲಿ ಹುಲಿ, ಚಿರತೆ ಸಾವು: ತನಿಖೆಗೆ ಆದೇಶ

ಬಂಡೀಪುರದಲ್ಲಿ ಹುಲಿ, ಚಿರತೆ ಸಾವು: ತನಿಖೆಗೆ ಆದೇಶ

4
0
Advertisement
bengaluru

2018-19ರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮೃತಪಟ್ಟ ಹುಲಿ ಮತ್ತು ಚಿರತೆಯ ಸಾವಿನ ಕುರಿತು ಅರಣ್ಯ ಇಲಾಖೆ ಮತ್ತೊಮ್ಮೆ ತನಿಖೆಗೆ ಆದೇಶಿಸಿದೆ. ಬೆಂಗಳೂರು: 2018-19ರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮೃತಪಟ್ಟ ಹುಲಿ ಮತ್ತು ಚಿರತೆಯ ಸಾವಿನ ಕುರಿತು ಅರಣ್ಯ ಇಲಾಖೆ ಮತ್ತೊಮ್ಮೆ ತನಿಖೆಗೆ ಆದೇಶಿಸಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಮರು ತನಿಖೆ ನಡೆಸುವಂತೆ ಆದೇಶ ನೀಡಿತ್ತು. ಸರ್ಕಾರ ನಿರ್ದೇಶನದಂತೆ ಅರಣ್ಯ ಇಲಾಖೆ ಮರು ತನಿಖೆಗೆ ಆದೇಶಿಸಿದೆ.

ಹುಲಿ ಸಂರಕ್ಷಿತ ಪ್ರದೇಶದ ಮೊಳೆಯೂರು ವ್ಯಾಪ್ತಿಯಲ್ಲಿ ಹುಲಿ ಹಾಗೂ ಚಿರತೆ ಸಾವನ್ನಪ್ಪಿತ್ತು. ಈ ಸಂಬಂಧ ತನಿಖೆ ನಡೆಸುವಂತೆ ಕಾರ್ಯಕರ್ತರು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಮಾಡಿಕೊಡಿದ್ದರು. ಇದರಂತೆ ಸಚಿವರು ಅರಣ್ಯ ಇಲಾಖೆಗೆ ಪ್ರಕರಣವನ್ನು ತನಿಖೆ ನಡೆಸುವಂತೆ ಸೂಚನೆ ನೀಡಿದ್ದರು.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಗಳು. ತನಿಖೆ ಆರಂಭಿಸಲು ಸರ್ಕಾರದ ಆದೇಶಕ್ಕಾಗಿ ಕಾಯುತ್ತಿದ್ದೇವೆಂದು ಹೇಳಿದ್ದಾರೆ.

bengaluru bengaluru

bengaluru

LEAVE A REPLY

Please enter your comment!
Please enter your name here