Home Uncategorized ಬಜೆಟ್ ಅಧಿವೇಶನದ ಬಳಿಕ ಮೀಸಲಾತಿ ಗೊಂದಲ ನಿವಾರಣೆಗೆ ಪ್ರತ್ಯೇಕ ಸಭೆ: ಸಿಎಂ ಸಿದ್ದರಾಮಯ್ಯ

ಬಜೆಟ್ ಅಧಿವೇಶನದ ಬಳಿಕ ಮೀಸಲಾತಿ ಗೊಂದಲ ನಿವಾರಣೆಗೆ ಪ್ರತ್ಯೇಕ ಸಭೆ: ಸಿಎಂ ಸಿದ್ದರಾಮಯ್ಯ

9
0
Advertisement
bengaluru

ಬಜೆಟ್ ಅಧಿವೇಶನ ಪೂರ್ಣಗೊಳ್ಳುತ್ತಿದ್ದಂತೆಯೇ ಮೀಸಲಾತಿ ಗೊಂದಲ ನಿವಾರಣೆಗೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು. ಬೆಂಗಳೂರು: ಬಜೆಟ್ ಅಧಿವೇಶನ ಪೂರ್ಣಗೊಳ್ಳುತ್ತಿದ್ದಂತೆಯೇ ಮೀಸಲಾತಿ ಗೊಂದಲ ನಿವಾರಣೆಗೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.

ಬುಧವಾರ ತಮ್ಮನ್ನು ಭೇಟಿ ಮಾಡಿದ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಸಚಿವರು ಹಾಗೂ ಶಾಸಕರ ನಿಯೋಗದ ಮನವಿ ಸ್ಪೀಕರಿಸಿದ ಬಳಿಕ ಮಾತನಾಡಿದ ಅವರು, ‘ಹಿಂದಿನ ಸರಕಾರ ಮೀಸಲಾತಿ ಕುರಿತು ಆತುರಾತುರವಾಗಿ ತೀರ್ಮಾನ ಮಾಡಿದ್ದು, ಗೊಂದಲ ಸೃಷ್ಟಿಸಿದೆ’ ಎಂದು ಆರೋಪಿಸಿದರು.

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರಕಾರ ಸೃಷ್ಟಿಸಿರುವ ಗೊಂದಲಗಳ ನಿವಾರಣೆಗೆ ಬಜೆಟ್ ಅಧಿವೇಶನ ಮುಗಿದ ನಂತರ ರಾಜ್ಯದ ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಹಾಗೂ ಸಮುದಾಯದ ಸಚಿವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸುತ್ತೇನೆ. ನಾನು ಸಾಮಾಜಿಕ ನ್ಯಾಯದ ಪರವಾಗಿದ್ದು ವಾಲ್ಮೀಕಿ ಸಮಾಜದ ಹಿತ ಕಾಪಾಡಲು ಬದ್ದವಾಗಿದ್ದೇನೆಂದು ಭರವಸೆ ನೀಡಿದರು.

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಗೊಂದಲ ಸೃಷ್ಟಿಸಿತ್ತು. ಮುಸ್ಲಿಮರಿಗೆ ಶೇ.4ರಷ್ಟಿದ್ದ ಮೀಸಲಾತಿ ರದ್ದು ಮಾಡಿ, ಒಕ್ಕಲಿಗರು ಹಾಗೂ ಲಿಂಗಾಯತರಿಗೆ ತಲಾ ಶೇ.2ರಷ್ಟು ಮೀಸಲಾತಿ ನೀಡಲಾಗಿದೆ. ಇದೇ ವೇಳೆ 2-ಸಿ, 2-ಡಿ ಎಂದು ಎರಡೂ ಪ್ರತ್ಯೇಕ ವಿಭಾಗವನ್ನು ಸೃಷ್ಟಿ ಮಾಡಿದ್ದಾರೆ. ಇದರ ಬಗ್ಗೆ ಗೊಂದಲಗಳಿವೆ. ಸಂವಿಧಾನಾತ್ಮಕವಾಗಿ ಇಲ್ಲದಿರುವ ಕಾರಣ ಸುದೀರ್ಘ ಚರ್ಚೆಯ ಅಗತ್ಯವಿದೆ. ಒಟ್ಟಾರೆ ಮೀಸಲಾತಿಯ ಪರಿಮಿತಿಯನ್ನು ಸಡಿಲಗೊಳಿಸದಿದ್ದರೆ ಪರಿಹಾರ ಸಿಗುವುದಿಲ್ಲ’ ಎಂದು ಅಭಿಪ್ರಾಯಪಟ್ಟರು.

bengaluru bengaluru

ಪರಿಶಿಷ್ಟ ಜಾತಿ ಹಾಗೂ ಪಂಗಡದ ಜಾತಿ ಪ್ರಮಾಣಪತ್ರ ವಿತರಣೆಯಾಗುತ್ತಿರುವ ಬಗ್ಗೆ ಸಿಆರ್‍ಇ ಸೆಲ್ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ರಾಯಚೂರು, ವಿಜಯಪುರ, ಭಾಗದಲ್ಲಿ ಕೋಲಿ, ಕಬ್ಬಲಿಗ, ತಳವಾರರ ಸಮುದಾಯಗಳನ್ನು ಎಸ್‍ಟಿಗೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ.

ಕೋಲಿ ಸಮಾಜದವರು ತಳವಾರರು ಎಂದೇ ಹೇಳುತ್ತಾರೆ. ಈ ಗೊಂದಲಗಳ ಬಗ್ಗೆಯೂ ತೀರ್ಮಾನವಾಗಬೇಕು. ನಾಯಕ ಸಮುದಾಯದ ತಳವಾಲರರನ್ನು ಮಾತ್ರ ಎಸ್‍ಟಿಗೆ ಸೇರಿಸಲಾಗಿದ್ದು, ಇವೆಲ್ಲಾ ಅತ್ಯಂತ ಸೂಕ್ಷ್ಮ ವಿಚಾರವಾಗಿರುವುದರಿಂದ ಸಂವಿಧಾನ ಮತ್ತು ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.

ಪರಿಶಿಷ್ಟ ಪಂಗಡಕ್ಕೆ ಸ್ಥಾಪನೆಯಾಗಿರುವ ಪ್ರತ್ಯೇಕ ಸಚಿವಾಲಯಕ್ಕೆ ಕಾರ್ಯದರ್ಶಿ ನೇಮಕಾತಿ ಮಾಡಲಾಗುವುದು. ಬುಡಕಟ್ಟು ಸಲಹಾ ಮಂಡಳಿ ಸ್ಥಾಪನೆ ಬಗ್ಗೆ ವರದಿ ನೀಡಿದಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು. ಮೀಸಲಾತಿಯನ್ನು ಸಂವಿಧಾನದ 9ನೆ ಪರಿಚ್ಛೇಧಕ್ಕೆ ಸೇರಿಸಲು ಸರಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುತ್ತದೆ. ಅದಕ್ಕೆ ಮೊದಲು ಬಿಜೆಪಿ ಸರಕಾರ ಸೃಷ್ಟಿಸಿದ ಗೊಂದಲಗಳನ್ನು ನಿವಾರಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದು ತಿಳಿಸಿದರು.


bengaluru

LEAVE A REPLY

Please enter your comment!
Please enter your name here