Home Uncategorized ಬಜೆಟ್‌ ಆಧಿವೇಶನ | ಕರ್ನಾಟಕ ಸರಕಾರದ ‘ಗ್ಯಾರಂಟಿ’ ಯೋಜನೆಗಳು ದೇಶಕ್ಕೆ ಮಾದರಿ : ರಾಜ್ಯಪಾಲ ಗೆಹ್ಲೋಟ್...

ಬಜೆಟ್‌ ಆಧಿವೇಶನ | ಕರ್ನಾಟಕ ಸರಕಾರದ ‘ಗ್ಯಾರಂಟಿ’ ಯೋಜನೆಗಳು ದೇಶಕ್ಕೆ ಮಾದರಿ : ರಾಜ್ಯಪಾಲ ಗೆಹ್ಲೋಟ್ ಶ್ಲಾಘನೆ

14
0

ಬೆಂಗಳೂರು: ವರ್ಷದ ಮೊದಲ ಅಧಿವೇಶನದಲ್ಲಿ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಕರ್ನಾಟಕ ಸರಕಾರದ ‘ಗ್ಯಾರಂಟಿ’ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದ 240 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಅವುಗಳಲ್ಲಿ 196 ತಾಲೂಕುಗಳನ್ನ ತೀವ್ರ ಬರಪೀಡಿತ ಎಂದು ವರ್ಗೀಕರಿಸಲಾಗಿದೆ. ಈ ಸಂಬಂಧ ಇದುವರೆಗೆ ಕೇಂದ್ರ ಸರಕಾರ ಕೇಳಿದ ಬರ ಪರಿಹಾರ ಹಣ ಘೋಷಣೆ ಮಾಡಿಲ್ಲ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here