Home Uncategorized ಬಬಲೇಶ್ವರ, ತಿಕೋಟಾದಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಮೇಲ್ದರ್ಜೆಗೇರಿಸಲಾಗುವುದು: ಸಚಿವ ಎಂಬಿ ಪಾಟೀಲ್

ಬಬಲೇಶ್ವರ, ತಿಕೋಟಾದಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಮೇಲ್ದರ್ಜೆಗೇರಿಸಲಾಗುವುದು: ಸಚಿವ ಎಂಬಿ ಪಾಟೀಲ್

13
0

ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ ನಗರಗಳಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಪರಿಷ್ಕರಿಸಲಾಗುವುದು. ಅದೇ ರೀತಿಯಾಗಿ ಪ್ರತಿ ನಾಗರಿಕರಿಗೆ ದಿನಕ್ಕೆ 135 ಲೀಟರ್ ನೀರು ಒದಗಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಬೃಹತ್​ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ… ವಿಜಯಪುರ: ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ ನಗರಗಳಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಪರಿಷ್ಕರಿಸಲಾಗುವುದು. ಅದೇ ರೀತಿಯಾಗಿ ಪ್ರತಿ ನಾಗರಿಕರಿಗೆ ದಿನಕ್ಕೆ 135 ಲೀಟರ್ ನೀರು ಒದಗಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಬೃಹತ್​ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್​ ಅವರು ಹೇಳಿದರು.

ವಿಜಯಪುರ, ಬಾಳೇಶ್ವರ, ತಿಕೋಟ ಕುಡಿಯುವ ನೀರಿನ ಯೋಜನೆಗಳ ಕುರಿತು ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು.

ಇದನ್ನೂ ಓದಿ: ರಾಜ್ಯದಲ್ಲಿ ಹೂಡಿಕೆ ಕುರಿತು ಫಾಕ್ಸ್‌ಕಾನ್ ಜೊತೆಗೆ ಕರ್ನಾಟಕ ಸರ್ಕಾರ ನಡೆಸಿದ ಚರ್ಚೆ ‘ಫಲಪ್ರದ’: ಸಚಿವ ಎಂಬಿ ಪಾಟೀಲ್

ಈ ಹಿಂದೆ ಬಬಲೇಶ್ವರ ಮತ್ತು ತಿಕೋಟಾ ಯೋಜನೆಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದವು, ಇದರಂತೆ ಪ್ರತಿ ನಿವಾಸಿಗೆ ದಿನಕ್ಕೆ 55 ಲೀಟರ್ ಪೂರೈಸಲು ಯೋಜಿಸಲಾಗುತ್ತಿತ್ತು. ಆದರೀಗ ಅವುಗಳನ್ನು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿಸಿರುವುದರಿಂದ ನಗರದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಅನುಗುಣವಾಗಿ ಯೋಜನೆಗಳನ್ನು ಪರಿಷ್ಕರಿಸಲಾಗುವುದು ಎಂದು ಹೇಳಿದರು.

ಕೊಲ್ಹಾರದಿಂದ ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ 10.74 ಕಿ.ಮೀ ಉದ್ದದ ಕಾಂಕ್ರೀಟ್ ಪೈಪ್‌ಲೈನ್‌ನಲ್ಲಿ ಸೋರಿಕೆ ಉಂಟಾಗುತ್ತಿರುವುದನ್ನು ಗುರುತಿಸಲಾಗಿದ್ದು, ಉತ್ತಮ ಗುಣಮಟ್ಟದ ಎಂಎಸ್ ಪೈಪ್ ಹಾಕಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕಂಪನಿ ನೋಂದಣಿ ಸಮಸ್ಯೆಗೆ ಸಚಿವ ಎಂಬಿ ಪಾಟೀಲ್ ಸ್ಪಂದನೆ: ‘ನಮ್ಮ ಆತ್ಮವಿಶ್ವಾಸ ಹೆಚ್ಚಿದೆ.. ಥ್ಯಾಂಕ್ಯೂ ಸರ್’.. ಟೆಕ್ಕಿ ಪ್ರತಿಕ್ರಿಯೆ!

ಈ ಯೋಜನೆಗೆ 2018 ರಲ್ಲಿ 32 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಈಗ ಇದನ್ನು ಪರಿಷ್ಕರಿಸಲಾಗಿದ್ದು, 52 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ವಿಳಂಬ ಮಾಡದೆ ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಜಯಪುರ ನಗರ ಅಗಾಧವಾಗಿ ಬೆಳೆಯುತ್ತಿದ್ದು, ಹಾಗಾಗಿ ನಗರದಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಮುಂದಿನ 50 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಬೇಕಾಗಿದೆ. ಹೆಚ್ಚಿದ ಸುರಕ್ಷತೆ ಮತ್ತು ವಿದ್ಯುತ್ ಬಳಕೆಯನ್ನು ಕಡಿಮೆ ಮಾಡಲು ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಆಯುಕ್ತ ಶರತ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಆಯುಕ್ತ ನಾಗೇಂದ್ರ ಪ್ರಸಾದ್, ಮುಖ್ಯ ಎಂಜಿನಿಯರ್‌ಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here