Home Uncategorized ಬರ್ಮುಡಾ ಧರಿಸಿ ಸಿಬ್ಬಂದಿಯಿಂದ ರೇಣುಕಾಚಾರ್ಯ ಜಯಂತಿ; ಸ್ವಾಮೀಜಿ ಕಾಲಿಗೆ ಬಿದ್ದು ತಹಶೀಲ್ದಾರ್ ಕ್ಷಮೆಯಾಚನೆ

ಬರ್ಮುಡಾ ಧರಿಸಿ ಸಿಬ್ಬಂದಿಯಿಂದ ರೇಣುಕಾಚಾರ್ಯ ಜಯಂತಿ; ಸ್ವಾಮೀಜಿ ಕಾಲಿಗೆ ಬಿದ್ದು ತಹಶೀಲ್ದಾರ್ ಕ್ಷಮೆಯಾಚನೆ

22
0
Advertisement
bengaluru

ಬರ್ಮುಡಾ ಧರಿಸಿ ಸಿಬ್ಬಂದಿ ರೇಣುಕಾಚಾರ್ಯ ಜಯಂತಿ ಆಚರಣೆ ಮಾಡಿದ ಹಿನ್ನಲೆಯಲ್ಲಿ ತಹಶೀಲ್ದಾರ್ ಸ್ವಾಮೀಜಿಗಳ ಕಾಲಿಗೆ ಬಿದ್ದು ಕ್ಷಮೆಯಾಚಿಸಿರುವ ಘಟನೆ ನಡೆದಿದೆ. ಹುಬ್ಬಳ್ಳಿ: ಬರ್ಮುಡಾ ಧರಿಸಿ ಸಿಬ್ಬಂದಿ ರೇಣುಕಾಚಾರ್ಯ ಜಯಂತಿ ಆಚರಣೆ ಮಾಡಿದ ಹಿನ್ನಲೆಯಲ್ಲಿ ತಹಶೀಲ್ದಾರ್ ಸ್ವಾಮೀಜಿಗಳ ಕಾಲಿಗೆ ಬಿದ್ದು ಕ್ಷಮೆಯಾಚಿಸಿರುವ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕು ಆಡಳಿತದಿಂದ ಕಾಟಾಚಾರಕ್ಕೆ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಆಚರಣೆ ಮಾಡಲಾಗಿದೆ ಎಂದು ಆರೋಪಿಸಿ ವೀರಶೈವ ಜಂಗಮ ಸಮಾಜದವರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ತಪ್ಪಿನ ಅರಿವಾಗಿ ತಹಶೀಲ್ದಾರ್ ಬಹಿರಂಗವಾಗಿ ಪ್ರತಿಭಟನಾ ನಿರತ ಸ್ವಾಮೀಜಿ ಕಾಲಿಗೆ ಬಿದ್ದು ಕ್ಷಮೆ ಯಾಚಿಸಿದ್ದಾರೆ.

ಇದನ್ನೂ ಓದಿ: ‘ಮಾಡಾಳ್ ವಿರೂಪಾಕ್ಷಪ್ಪ ಹುಟ್ಟುತ್ತಲೇ ಆಗರ್ಭ ಶ್ರೀಮಂತರು, ಇದು ಕಾಂಗ್ರೆಸ್ ಷಡ್ಯಂತ್ರ’: ಬೆಂಬಲಿಗರ ವಾದ, ಇಂದು ಜಾಮೀನು ಭವಿಷ್ಯ ನಿರ್ಧಾರ, ತನಿಖಾಧಿಕಾರಿಗಳ ಬದಲಾವಣೆ

ಕಲಘಟಗಿ ತಾಲೂಕು ಆಡಳಿತದಿಂದ ಯಾವುದೇ ಪೂರ್ವಭಾವಿ ಸಭೆ ಕರೆಯದೇ ಹಾಗೂ ಕಚೇರಿ ಸಿಬ್ಬಂದಿ ಬರ್ಮುಡಾ ಧರಿಸಿ ಕಚೇರಿಯಲ್ಲಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದರು. ಈ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವೈರಲ್ ಆಗಿದ್ದವು. ಇದರಿಂದ ಆಕ್ರೋಶಗೊಂಡ ವೀರಶೈವ ಸಮಾಜದ ಮುಖಂಡರು, ಜಗದ್ಗುರುಗಳಿಗೆ ಅಪಮಾನ ಮಾಡಲಾಗಿದೆ ಎಂದು ಹನ್ನೆರಡು ಎತ್ತಿನ ಮಠದ ಪೀಠಾಧಿಪತಿ ರೇಣುಕಾಚಾರ್ಯರ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದ್ದರು.

bengaluru bengaluru

ತಹಶೀಲ್ದಾರ್ ಯಲ್ಲಪ್ಪ ಗೋಣೆನ್ನನವರನ್ನು ಪ್ರತಿಭಟನಾನಿರತರು ತರಾಟೆಗೆ ತಗೆದುಕೊಂಡಿದ್ದರು. ಸಮಾಜದ ಆಕ್ರೋಶದಿಂದ ತಪ್ಪಿನ ಅರಿವಾಗಿ ತಹಶೀಲ್ದಾರ್ ಶ್ರೀಗಳ ಕಾಲಿಗೆ ಬಿದ್ದು, ಕ್ಷಮೆಯಾಚನೆ ಮಾಡಿದ್ದಾರೆ. ಮತ್ತೊಮ್ಮೆ ರೇಣುಕಾಚಾರ್ಯ ಜಯಂತಿಯನ್ನು ಅದ್ದೂರಿಯಾಗಿ ಮಾಡುವ ಭರವಸೆ ನೀಡಿದ್ದಾರೆ.
 


bengaluru

LEAVE A REPLY

Please enter your comment!
Please enter your name here