ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯ ಕೃಷ್ಣ ಕಾಲೋನಿಯಲ್ಲಿ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಳ್ಳಾರಿ: ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯ ಕೃಷ್ಣ ಕಾಲೋನಿಯಲ್ಲಿ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಮೃತ ವ್ಯಕ್ತಿಯನ್ನು 40 ವರ್ಷದ ಮೆಹಬೂಬ್ ಬಾಷಾ ಎಂದು ಗುರುತಿಸಲಾಗಿದೆ. ನಿನ್ನೆ ಮಗು ಹುಟ್ಟುಹಬ್ಬವಿತ್ತು. ಹೀಗಾಗಿ ಕೇಕ್ ತಂದು ಕತ್ತರಿಸಲು ಸಿದ್ಧತೆಗಳು ಮಾಡಿಕೊಳ್ಳುತ್ತಿದ್ದಾಗ ದುಷ್ಕರ್ಮಿಗಳು ಮನೆಯ ಬಾಗಿಲು ಬಡಿದಿದ್ದಾರೆ.
ಈ ವೇಳೆ ಮನೆಯಿಂದ ಹೊರಬಂದ ಮೊಹಬೂಬ್ ಬಾಷಾನ ಎದೆಗೆ ಚಾಕು ಇರಿದು ನಂತರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಬಂಧಿತ ಶಂಕಿತ ಉಗ್ರರಿಂದ 4 ಗ್ರೆನೇಡ್ ಗಳು ವಶಕ್ಕೆ
ಮೊಹಬೂಬ್ ಬಾಷಾ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು ಹಣಕಾಸು ವಿಚಾರವಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತರನ್ನು ಕೋಳಿ ಅನ್ವರ್, ಅಲ್ತಾಫ್, ಸಿರಾಜ್ ಎಂಬುವರನ್ನು ಪೊಲೀಸರು ಬಂಧಿಸಿದ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.