Home Uncategorized ಬಳ್ಳಾರಿ: ಹಾಸ್ಟೆಲ್ ಬಿಟ್ಟು ಹೋಗಿದ್ದ 3 ವಿದ್ಯಾರ್ಥಿಗಳು ನಡುರಾತ್ರಿ ಬೆಂಗಳೂರು ಬಸ್​​ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು

ಬಳ್ಳಾರಿ: ಹಾಸ್ಟೆಲ್ ಬಿಟ್ಟು ಹೋಗಿದ್ದ 3 ವಿದ್ಯಾರ್ಥಿಗಳು ನಡುರಾತ್ರಿ ಬೆಂಗಳೂರು ಬಸ್​​ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು

2
0
bengaluru

ಬಳ್ಳಾರಿ: ಸಾರಿಗೆ ಬಸ್​ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು(Students) ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ತಡರಾತ್ರಿ ಸಂಭವಿಸಿದೆ. ಎಮ್ಮಿಗನೂರಿನ ಕನಕರಾಜು(19), ಮುರುಡಿ ಗ್ರಾಮದ ಶಂಕರ(18), ಸಂಡೂರು ತಾಲೂಕಿನ ನಾಗೇನಹಳ್ಳಿಯ ಹೊನ್ನೂರ(22) ಮೃತ ದುರ್ದೈವಿಗಳು.

ಮಧ್ಯರಾತ್ರಿ 2 ಗಂಟೆ ಸುಮಾರಿಗೆ ರಸ್ತೆ ಕ್ರಾಸ್ ಮಾಡುವ ವೇಳೆ ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಸಾರಿಗೆ ಬಸ್​ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಎಸ್​​​ಸಿ, ಎಸ್​​ಟಿ ಹಾಸ್ಟಲ್ ವಿದ್ಯಾರ್ಥಿಗಳು. ಇವರು 2 ದಿನದ ಹಿಂದೆ ಹಾಸ್ಟಲ್​ ಬಿಟ್ಟು ಹೋಗಿದ್ದರು. ಘಟನೆ ಸಂಬಂಧ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿಗಳು ಮಧ್ಯರಾತ್ರಿ ಹಲಕುಂದಿ ಬಳಿ ಯಾಕೆ ಹೋಗಿದ್ದರು ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಚುರುಕುಗೊಂಡ ಡಬಲ್ ಮರ್ಡರ್​ ಪ್ರಕರಣದ ತನಿಖೆ; ಆರೋಪಿಗಳ ಬಂಧನಕ್ಕೆ ವಿಶೇಷ ತಂಡಗಳ ರಚನೆ

ಟಾಟಾ ಏಸ್​ಗೆ ಬೈಕ್ ಡಿಕ್ಕಿ ಸವಾರ ಗಂಭಿರ ಗಾಯ

bengaluru

ರಾಮನಗರ ತಾಲೂಕಿನ ಮಾದಾಪುರ ಗ್ರಾಮದ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಫಘಾತ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುವಾಗ ಟಾಟಾ ಏಸ್​ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಡಿಕ್ಕಿ ರಭಸಕ್ಕೆ ಬೈಕ್ ಹೊತ್ತಿ ಉರಿದಿದೆ. ಗಾಯಾಳು ಬೈಕ್ ಸವಾರ ರಾಮನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಬೈಕ್​ಗೆ ಹೊತ್ತಿಕೊಂಡಿದ್ದ ಬೆಂಕಿ ನಂದಿಸಿದ್ದಾರೆ. ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

bengaluru

LEAVE A REPLY

Please enter your comment!
Please enter your name here