ಗದಗ: ಗದಗ ಕೇಂದ್ರ ಬಸ್ ನಿಲ್ದಾಣದಲ್ಲಿ ಚಾಲಕನ ಅಜಾಗರೂಕತೆ ಹಾಗೂ ಅತಿವೇಗದ ಚಾಲನೆಯಿಂದ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಮೂವರು ಮಹಿಳಾ ಪ್ರಯಾಣಿಕರ ಪೈಕಿ ಓರ್ವ ಮಹಿಳೆ ಮೇಲೆ ಬಸ್ ಹರಿದು ಅದೃಷ್ಟವಶಾತ್ ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಅಪಘಾತದ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಭಾನುವಾರ ಮಧ್ಯಾಹ್ನದ ವೇಳೆ ಘಟನೆ ನಡೆದಿದೆ ಎನ್ನಲಾಗಿದ್ದು, ಅಪಘಾತದಲ್ಲಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದಬಂದಿದೆ.
ಬಸ್ ನಿಲ್ದಾಣದ ಆವರಣದಲ್ಲಿ ನಡೆದು ಹೋಗುತ್ತಿದ್ದ ಮಹಿಳಾ ಪ್ರಯಾಣಿಕರಿಗೆ ತಿರುವಿನಲ್ಲಿ ಏಕಾಏಕಿ ಅತಿವೇಗದಲ್ಲಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಓರ್ವ ಮಹಿಳೆ ಬಸ್ನ ಹಿಂಬದಿ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಚಾಲಕನ ಅಜಾಗರೂಕತೆ ಹಾಗೂ ಅತಿವೇಗದ ಚಾಲನೆಯಿಂದ ಗದಗ ಕೇಂದ್ರ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮಹಿಳಾ ಪ್ರಯಾಣಿಕರಲ್ಲಿ ಓರ್ವ ಮಹಿಳೆ ಮೇಲೆ ಬಸ್ ಹರಿದು, ಅದೃಷ್ಟವಶಾತ್ ಇನ್ನಿಬ್ಬರು ಮಹಿಳೆಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಅಪಘಾತದ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ… pic.twitter.com/ly1XbiVjwS
— kannadaprabha (@KannadaPrabha) February 24, 2026
ಘಟನೆಯಲ್ಲಿ ಶಾಂತವ್ವ ಸಿದ್ದಪ್ಪ ಕೊರ್ತಿ ಎಂಬ ಮಹಿಳೆಯ ಕಾಲು ಗಂಭೀರವಾಗಿ ಗಾಯಗೊಂಡಿದ್ದು, ಬೆನ್ನಿನ ಭಾಗಕ್ಕೂ ತೀವ್ರ ಪೆಟ್ಟು ಬಿದ್ದಿದೆ.
ಗಂಭೀರ ಗಾಯಗೊಂಡ ಇವರನ್ನು ತಕ್ಷಣ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಎದೆ ಝಲ್ ಎನಿಸುವಂತಿದೆ.
