Home Uncategorized ಬಿಜೆಪಿಯ ಸುಳ್ಳಿಗೆ ನೀವು ದಾಳವಾಗಬೇಡಿ: ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು!

ಬಿಜೆಪಿಯ ಸುಳ್ಳಿಗೆ ನೀವು ದಾಳವಾಗಬೇಡಿ: ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು!

18
0

ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳು ಕಳೆಯುವಷ್ಟರಲ್ಲಿಯೇ ಆಂತರಿಕ ಭಿನ್ನಮತ ಸ್ಫೋಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಸಿಎಲ್ ಪಿ ಸಭೆ ನಡೆಸಿ ಶಾಸಕರನ್ನು ತರಾಟೆ ತೆಗೆದುಗೊಂಡರು. ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳು ಕಳೆಯುವಷ್ಟರಲ್ಲಿಯೇ ಆಂತರಿಕ ಭಿನ್ನಮತ ಸ್ಫೋಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಸಿಎಲ್ ಪಿ ಸಭೆ ನಡೆಸಿ ಶಾಸಕರನ್ನು ತರಾಟೆ ತೆಗೆದುಗೊಂಡರು.

ಕೆಲ ಕಾಂಗ್ರೆಸ್ ಹಿರಿಯ ಶಾಸಕರಿಗೆ ಸಚಿವರು ಬೆಲೆ ಕೊಡುತ್ತಿಲ್ಲ. ವರ್ಗಾವಣೆಗಳು ಮಾಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲವನ್ನು ಸೃಷ್ಟಿಸಿತ್ತು. ಹೀಗಾಗಿ ಇಂದು ನಡೆದ ಸಿಎಲ್ ಪಿ ಸಭೆಯಲ್ಲಿ ಎಲ್ಲವನ್ನೂ ಆಲಿಸಿದ ಸಿಎಂ ಸಿದ್ದರಾಮಯ್ಯ ಬಿಜೆಪಿಯ ಸುಳ್ಳಿಗೆ ನೀವು ದಾಳವಾಗಬೇಡಿ ಎಂದು ಶಾಸಕರಿಗೆ ಕಿವಿಮಾತು ಹೇಳಿದ್ದಾರೆ. 

ಹಿರಿಯ ಶಾಸಕರಿಗೆ ಸಚಿವರು ಬೆಲೆ ಕೊಡುತ್ತಿಲ್ಲ ಎಂಬ ಅಸಮಾದಾನದ ಪತ್ರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಇನ್ನು ಬಹಿರಂಗ ಪತ್ರ ಬರೆದಿರುವುದಕ್ಕೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ: ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲು ಸಚಿವ ಸಂಪುಟ ಅಸ್ತು, 67 ಕೈದಿಗಳ ಬಿಡುಗಡೆಗೂ ಒಪ್ಪಿಗೆ

ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಅವರು, ಏನೇ ಅಸಮಾಧಾನ ಇದ್ದರೂ ನನ್ನ ಬಳಿ ಖುದ್ದು ಚರ್ಚಿಸುವಂತೆ ಸೂಚಿಸಿದ್ದಾರೆ. ಎಷ್ಟು ಒತ್ತಡಗಳಿದ್ದರೂ ತಿಂಗಳಿಗೊಮ್ಮೆ ಶಾಸಕರ ಸಭೆ ಕರೆಯುತ್ತೇನೆ ಎಂದೂ ಭರವಸೆ ನೀಡಿದ್ದಾರೆ.

ಇನ್ನು ಕೆಲ ಶಾಸಕರು ಇಂತಹವರನ್ನು ನಂಬಿ ರಾಜಕೀಯ ಮಾಡಿದರೆ ಪ್ರಯೋಜವಿಲ್ಲ ಎಂದು ಸಭೆಯಿಂದ ಹೊರಹೋದರು. ಇನ್ನು ಕೆಲ ಶಾಸಕರು ಇವರನ್ನು ನಂಬಿ ಏನನ್ನು ಮಾಡುವುದಕ್ಕೆ ಆಗುವುದಿಲ್ಲ, ಎಲ್ಲಾ ವ್ಯರ್ಥ ಎಂದು ಕೆಲ ಮಂದಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. 

LEAVE A REPLY

Please enter your comment!
Please enter your name here