Home Uncategorized ಬಿಜೆಪಿ ಭ್ರಷ್ಟಾಚಾರ: ಮಾರ್ಚ್ 9ರಂದು 'ಕರ್ನಾಟಕ ಬಂದ್'ಗೆ ಕರೆ ನೀಡಿದ ಕಾಂಗ್ರೆಸ್

ಬಿಜೆಪಿ ಭ್ರಷ್ಟಾಚಾರ: ಮಾರ್ಚ್ 9ರಂದು 'ಕರ್ನಾಟಕ ಬಂದ್'ಗೆ ಕರೆ ನೀಡಿದ ಕಾಂಗ್ರೆಸ್

24
0

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ವಿರೋಧಿಸಿ ಇದೇ ಮಾರ್ಚ್ 9ರಂದು ರಾಜ್ಯ ಕಾಂಗ್ರೆಸ್ ಘಟಕ ‘ಕರ್ನಾಟಕ ಬಂದ್’ಗೆ ಕರೆ ನೀಡಿದೆ. ತುಮಕೂರು: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ವಿರೋಧಿಸಿ ಇದೇ ಮಾರ್ಚ್ 9ರಂದು ರಾಜ್ಯ ಕಾಂಗ್ರೆಸ್ ಘಟಕ ‘ಕರ್ನಾಟಕ ಬಂದ್’ಗೆ ಕರೆ ನೀಡಿದೆ.

ಆಡಳಿತಾರೂಢ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ಹೋರಾಟದ ಭಾಗವಾಗಿ ಕರ್ನಾಟಕ ಕಾಂಗ್ರೆಸ್ ತನ್ನ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಕುಮಾರ್ ಎಂವಿ ಅವರಿಂದ ಲೋಕಾಯುಕ್ತ ಅಧಿಕಾರಿಗಳು 8 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಮಾರ್ಚ್ 9 ರಂದು ಎರಡು ಗಂಟೆಗಳ ಕಾಲ ಬಂದ್‌ಗೆ ಕರೆ ನೀಡಿದೆ. ಮಾರ್ಚ್ 9 ರಂದು ಕರ್ನಾಟಕ ಬಂದ್‌ಗೆ ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ಕೊಟ್ಟಿದ್ದು, ತುಮಕೂರಿನ ಮಾತನಾಡಿದ ಅವರು, ಬಿಜೆಪಿ ಭ್ರಷ್ಟಾಚಾರ ಖಂಡಿಸಿ ಮಾರ್ಚ್ 9 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 11 ಗಂಟೆವರೆಗೆ ಎಲ್ಲಾ ವ್ಯಾಪರಿಗಳು ಬಂದ್‌ಗೆ ಬೆಂಬಲ ನೀಡುವಂತೆ ಕೋರಿದ್ದಾರೆ. 

ಇದನ್ನೂ ಓದಿ: 40 ಪರ್ಸೆಂಟ್ ಕಮಿಷನ್ ಸರ್ಕಾರದಲ್ಲಿ ಅತಿ ಹೆಚ್ಚು ‘ಫಲ’ ಉಂಡಿರುವ ಫಲಾನುಭವಿ ಇವರು: ಕಾಂಗ್ರೆಸ್ ಟ್ವೀಟ್

‘ಬಂದ್ ವೇಳೆ ಯಾವುದೇ ಶಾಲೆ, ಕಾಲೇಜು ಆಸ್ಪತ್ರೆ ಸಾರ್ವಜನಿಕರಿಗೆ ತೊಂದರೆಯಾಗಬಾರದು, ಕಾನೂನು (Law) ಕೈಗೆತ್ತಿಕೊಳ್ಳುವ ಕೆಲಸ ಯಾರೂ ಮಾಡಬಾರದು. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತಮಾಡಲು ನಿಮ್ಮ ಸಹಕಾರ ಬೇಕು. ಅದಕ್ಕಾಗಿ ಎಲ್ಲ ಸಂಘ, ಸಂಸ್ಥೆಗಳು ಸಹಕಾರ ಕೊಡಬೇಕು.

ಕೊರಟಗೆರೆಯಲ್ಲಿ ನಡೆದ ರಾಜೀವ್ ಭವನ ಉದ್ಘಾಟನೆ ಹಾಗೂ ತುಮಕೂರು ಜಿಲ್ಲಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ @kharge, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @rssurjewala, ಕೆಪಿಸಿಸಿ ಅಧ್ಯಕ್ಷರಾದ @DKShivakumar, ಮಾಜಿ ಡಿಸಿಎಂ @DrParameshwara, ಕಾರ್ಯಾಧ್ಯಕ್ಷರಾದ @SaleemAhmadINC,@JarkiholiSatish ಸೇರಿ ಹಲವರು ಉಪಸ್ಥಿತರಿದ್ದರು. pic.twitter.com/JOgqm0NgOq
— Karnataka Congress (@INCKarnataka) March 5, 2023

ರಾಷ್ಟ್ರದ ನಾಯಕರ ಬಳಿ ಅನೇಕ ವಿಚಾರಗಳನ್ನ ಚರ್ಚೆ ಮಾಡಿದ್ದೇವೆ. ಕಳೆದ ಮೂರುವರೆ ವರ್ಷದಿಂದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಜನರ ಗಮನ ಸೆಳೆದಿದ್ದೇವೆ. ಬಿಜೆಪಿ ಇಡೀ ರಾಜ್ಯಕ್ಕೆ ಅಗೌರವ ತರುವ ಕೆಲಸ ಬಿಜೆಪಿ ಮಾಡಿದೆ. ಸಿಎಂ ಭ್ರಷ್ಟಾಚಾರಕ್ಕೆ ಆಧಾರ ಕೊಡಿ ಅಂತಾ ಕೇಳಿದ್ರು, ಗುತ್ತಿಗೆದಾರ ಸಂಘದ ಅಧ್ಯಕ್ಷರು ನೇರವಾಗಿ ಮೋದಿ ಅವರಿಗೆ ಪತ್ರ ಬರೆದಿದ್ದರು. ಈವರೆಗೂ ಯಾವುದೇ ಉತ್ತರ ಕೊಡದೇ ಮೋದಿ ನಾನು ತಿನ್ನೋದಿಲ್ಲ, ತಿನ್ನೋರಿಗೂ ಬಿಡಲ್ಲ’ ಎಂದು ಹೇಳಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಭ್ರಷ್ಟಾಚಾರ ಉತ್ತುಂಗದಲ್ಲಿದೆ: ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ

ಎಲ್ಲ ಕಚೇರಿಗಳಲ್ಲಿ ಆಗುತ್ತಿರುವ ಭ್ರಷ್ಟಾಚಾರದ ಬಗ್ಗೆ ಜನರ ಗಮನ ಸೆಳೆದಿದ್ದೇವೆ. ಭ್ರಷ್ಟಾಚಾರದಿಂದ ಸಾವಿರಾರು ಜನ ನೊಂದಿದ್ದಾರೆ. ಸಿಎಂ ಕೇಳಿದ ಸಾಕ್ಷಿಗೆ ಲೋಕಾಯುಕ್ತ ಅಧಿಕಾರಿಗಳು ಕೊಟ್ಟಿದ್ದಾರೆ. ಸರ್ಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ. ಎಲ್ಲಾ ಲೊಕಾಯುಕ್ತ ಅಧಿಕಾರಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಇದರ ನೈತಿಕ ಹೊಣೆಹೊತ್ತು ಸಿಎಂ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.
 

LEAVE A REPLY

Please enter your comment!
Please enter your name here