Home Uncategorized ಬಿಜೆಪಿ ಶಾಸಕ ಓಲೇಕಾರ್‌ಗೆ ಬಿಗ್ ರಿಲೀಫ್: ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆ ಅಮಾನತಿನಲ್ಲಿರಿಸಿದ ಹೈಕೋರ್ಟ್‌!

ಬಿಜೆಪಿ ಶಾಸಕ ಓಲೇಕಾರ್‌ಗೆ ಬಿಗ್ ರಿಲೀಫ್: ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆ ಅಮಾನತಿನಲ್ಲಿರಿಸಿದ ಹೈಕೋರ್ಟ್‌!

17
0

ಸ್ವಜನ ಪಕ್ಷಪಾತ ಮತ್ತು ಕ್ರಿಮಿನಲ್‌ ವಂಚನೆ ಪ್ರಕರಣದಲ್ಲಿ ಬಿಜೆಪಿಯ ಹಾವೇರಿ ಶಾಸಕ ನೆಹರೂ ಓಲೇಕಾರ್‌ ಅವರಿಗೆ ವಿಚಾರಣಾಧೀನ ನ್ಯಾಯಾಲಯವು ವಿಧಿಸಿದ್ದ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ. ಬೆಂಗಳೂರು: ಸ್ವಜನ ಪಕ್ಷಪಾತ ಮತ್ತು ಕ್ರಿಮಿನಲ್‌ ವಂಚನೆ ಪ್ರಕರಣದಲ್ಲಿ ಬಿಜೆಪಿಯ ಹಾವೇರಿ ಶಾಸಕ ನೆಹರೂ ಓಲೇಕಾರ್‌ ಅವರಿಗೆ ವಿಚಾರಣಾಧೀನ ನ್ಯಾಯಾಲಯವು ವಿಧಿಸಿದ್ದ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ರದ್ದು ಕೋರಿ ನೆಹರು ಓಲೇಕಾರ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ನಡೆಸಿತು. ಈ ವೇಳೆ ವಿಚಾರಣಾಧೀನ ನ್ಯಾಯಾಲಯದ ಆದೇಶ ಅಮಾನತಿನಲ್ಲಿರಿಸಿ, ನೆಹರು ಓಲೇಕಾರ್‌ ಅವರಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್‌ ಆದೇಶಿಸಿದೆ.

ಇದನ್ನೂ ಓದಿ: ಭ್ರಷ್ಟಾಚಾರ ಪ್ರಕರಣ: ಬಿಜೆಪಿ ಶಾಸಕ ನೆಹರು ಓಲೇಕಾರ್‌, ಇಬ್ಬರು ಪುತ್ರರಿಗೆ 2 ವರ್ಷ ಜೈಲು ಶಿಕ್ಷೆ

ಇದಕ್ಕೂ ಮುನ್ನ, ಅರ್ಜಿದಾರರ ಪರ ವಕೀಲ ಆರ್ ಸ್ವರೂಪ ಆನಂದ್ ಅವರು, ಅರ್ಜಿದಾರರ ವಿರುದ್ಧ ದೂರು ದಾಖಲಿಸಲು ದೂರುದಾರರು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನಮತಿಯ ಪಡೆದಿಲ್ಲ. ಪೂರ್ವಾನುಮತಿ ಪಡೆಯದೇ ಸಲ್ಲಿಸಿದ್ದ ದೂರನ್ನು ವಿಚಾರಣೆ ನಡೆಸಿ ಅರ್ಜಿದಾರರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ವಿಚಾರಣಾಧೀನ ನ್ಯಾಯಾಲಯದ ಕ್ರಮ ಕಾನೂನುಬಾಹಿರ. ಪ್ರಕರಣದ ಇತರೆ ಆರೋಪಗಳ ಜೊತೆಗೆ ಅರ್ಜಿದಾರ ಶಾಸಕರು ಅಪರಾಧಿಕ ಒಳಸಂಚು ರೂಪಿಸಿಲ್ಲ. ಆದ್ದರಿಂದ, ಅರ್ಜಿದಾರರನ್ನು ದೋಷಿಯಾಗಿ ತೀರ್ಮಾನಿಸಿ ಮತ್ತು ಶಿಕ್ಷೆ ವಿಧಿಸಿ ವಿಚಾರಣಾಧೀನ ನ್ಯಾಯಾಲಯದ ಹೊರಡಿಸಿದ ಆದೇಶವನ್ನು ಅಮಾನತ್ತಿನಲ್ಲಿರಿಸಬೇಕು. ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದ್ದರು.

ಸ್ವಜನ ಪಕ್ಷಪಾತ ಮತ್ತು ಕ್ರಿಮಿನಲ್‌ ವಂಚನೆ ಪ್ರಕರಣದಲ್ಲಿ ಶಾಸಕ ನೆಹರೂ ಓಲೇಕಾರ್‌ ಮತ್ತು ಅವರ ಇಬ್ಬರು ಪುತ್ರರಾದ ದೇವರಾಜ್‌ ಮತ್ತು ಮಂಜುನಾಥ್‌ ಹಾಗೂ ಐವರು ಅಧಿಕಾರಿಗಳಿಗೆ ತಲಾ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಫೆಬ್ರವರಿ 13ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿತ್ತು.

ಇದನ್ನೂ ಓದಿ: ಶಾಸಕರ ಪುತ್ರನಿಂದ ಕಿರುಕುಳ ಆರೋಪ: ನಾಲ್ವರು ದಲಿತರು ಆತ್ಮಹತ್ಯೆಗೆ ಯತ್ನ

2013ರಲ್ಲಿ ಹಾವೇರಿಯ ಶಶಿಧರ್‌ ಹಳ್ಳಿಕೇರಿ ಅವರು ದೂರು ದಾಖಲಿಸಿ, 2008 ಮತ್ತು 2013ರ ಅವಧಿಯಲ್ಲಿ ಶಾಸಕರಾಗಿದ್ದ ಓಲೇಕಾರ್‌ ಅವರು ಸರ್ಕಾರದ ಸಿವಿಲ್‌ ಕೆಲಸಗಳನ್ನು ಬೇರೆಯವರಿಗೆ ದಕ್ಕದಂತೆ ತಮ್ಮ ಇಬ್ಬರು ಪುತ್ರರಿಗೆ ಕೊಡಿಸಿದ್ದರು ಎಂದು ಆರೋಪಿಸಿದ್ದರು. ಈ ಖಾಸಗಿ ದೂರನ್ನು ಆಧರಿಸಿ ಹಾವೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿತ್ತು. ಇದರ ಅನ್ವಯ ಐಪಿಸಿ ಸೆಕ್ಷನ್‌ಗಳಾದ 197, 198, 409 ಮತ್ತು 420 ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್‌ 13(1)(ಡಿ) ಜೊತೆಗೆ 13(2) ಅಡಿ ಪ್ರಕರಣ ದಾಖಲಿಸಿ, ಲೋಕಾಯುಕ್ತ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು ಜೈಲು ಶಿಕ್ಷೆಯ ಜೊತೆಗೆ ಶಾಸಕ ಓಲೇಕಾರ್‌ಗೆ ₹2,000 ದಂಡ ವಿಧಿಸಿದ್ದು, ಅವರ ಇಬ್ಬರು ಪುತ್ರರಿಗೆ ತಲಾ ₹6,000 ಹಾಗೂ 4,5,7,8 ಮತ್ತು 9ನೇ ಆರೋಪಿಗಳಿಗೆ ತಲಾ ₹8,000 ದಂಡ ವಿಧಿಸಿತ್ತು. ದೋಷಿಗಳ ಪೈಕಿ ಓಲೇಕಾರ್‌ ಮಾತ್ರ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಘಟನೆ ಹಿನ್ನೆಲೆ
50 ಲಕ್ಷ ರೂ. ಮೊತ್ತದ ಕಾಮಗಾರಿ ಪುತ್ರರಿಗೇ ನೀಡಿದ ಆರೋಪದಡಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌  ಮತ್ತು ಪುತ್ರರಾದ ಮಂಜುನಾಥ್‌, ದೇವರಾಜ್‌ ಓಲೆಕಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ 2 ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಕಾಂಕ್ರೀಟ್ ರಸ್ತೆ ಸೇರಿದಂತೆ ಕೆಲ ಕಾಮಗಾರಿಯಲ್ಲಿ ಶಾಸಕ ಓಲೆಕಾರ್‌ ವಿರುದ್ಧ ಸ್ವಜನ ಪಕ್ಷಪಾತ ಆರೋಪಿಸಿತ್ತು. ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆಯಾದ ಹಿನ್ನೆಲೆ ಜನಪ್ರತಿನಿಧಿಗಳ ನ್ಯಾಯಾಲಯದಿಂದಲೇ‌ ಜಾಮೀನು ಮಂಜೂರು ಮಾಡಲಾಗಿತ್ತು.
 

LEAVE A REPLY

Please enter your comment!
Please enter your name here