ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಡಾ ಕೆ ಸುಧಾಕರ್ ಆರೋಗ್ಯ ಮಂತ್ರಿಯಾಗಿದ್ದಾಗ ಕೋವಿಡ್ ಹಗರಣ ಬಹಳ ದೊಡ್ಡ ಸುದ್ದಿ ಮಾಡಿತ್ತು. ಹಿಂದಿನ ಸರ್ಕಾರದಲ್ಲಿ ಕೋವಿಡ್ ಸೋಂಕಿನ ಸಂದರ್ಭದಲ್ಲಿ ಸಾರ್ವಜನಿಕ ಹಣ ದುರುಪಯೋಗದ ಆರೋಪ ಕೇಳಿಬಂದಿತ್ತು. ಅದೀಗ ಮತ್ತೆ ಸುದ್ದಿಯಲ್ಲಿದೆ. ಬೆಂಗಳೂರು: ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಡಾ ಕೆ ಸುಧಾಕರ್ ಆರೋಗ್ಯ ಮಂತ್ರಿಯಾಗಿದ್ದಾಗ ಕೋವಿಡ್ ಹಗರಣ ಬಹಳ ದೊಡ್ಡ ಸುದ್ದಿ ಮಾಡಿತ್ತು. ಹಿಂದಿನ ಸರ್ಕಾರದಲ್ಲಿ ಕೋವಿಡ್ ಸೋಂಕಿನ ಸಂದರ್ಭದಲ್ಲಿ ಸಾರ್ವಜನಿಕ ಹಣ ದುರುಪಯೋಗದ ಆರೋಪ ಕೇಳಿಬಂದಿತ್ತು. ಅದೀಗ ಮತ್ತೆ ಸುದ್ದಿಯಲ್ಲಿದೆ.
ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ಹಗರಣಗಳ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ. ಕೋವಿಡ್ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವ ಚಿಂತನೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.
ಕೊರೋನಾ ಹಗರಣ ಬಗ್ಗೆ ನ್ಯಾಯಾಂಗ ತನಿಖೆ ವಿಚಾರವನ್ನು ಸಿಎಂ ಮುಂದೆ ಪ್ರಸ್ತಾಪಿಸಿದ್ದೇವೆ. ಸಾರ್ವಜನಿಕರ ಹಣ ದುರುಪಯೋಗದ ಬಗ್ಗೆ ವರದಿ ಬಂದಿದೆ. ತನಿಖೆ ನಡೆಸುವುದು ನಿಶ್ಚಿತ ಎಂದಿದ್ದಾರೆ.
ಬೆಂಗಳೂರು ಸಿಟಿ ರೌಂಡ್ಸ್ ಹಾಕುತ್ತಿದ್ದು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ನಾನು ಆಸ್ಪತ್ರೆಗೆ ಬೇಟಿ ಕೊಟ್ಟಿದ್ದೇನೆ. ಇಲ್ಲಿ ಸ್ವಚ್ಚತೆ, ಡಾಕ್ಟರ್ಗಳ ಹಾಜರಾತಿ ಬಗ್ಗೆ ಸಾಮಾಜಿಕ ಕಾರ್ಯಕರ್ತನ ಮೂಲಕ ದೂರು ಬಂದಿತ್ತು. ವಿಧಾನಸಭೆಯಲ್ಲಿ ಜಯನಗರ ಆಸ್ಪತ್ರೆಗೆ ಭೇಟಿ ನೀಡುತ್ತೇನೆ ಎಂದಿದ್ದೆ. ಆದೇ ರೀತಿ ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಇನ್ನು ಆಸ್ಪತ್ರೆ ಪರಿಶೀಲನೆ ನಡೆಸುತ್ತಿದ್ದೇನೆ. ದಿಢೀರ್ ಭೇಟಿ ಕೊಡುವುದನ್ನು ಮುಂದಿನ ದಿನಗಳಲ್ಲಿ ಮಾಡುತ್ತೇನೆ. ಹೊರಗಿನಿಂದ ಬಂದು ಆಸ್ಪತ್ರೆಯಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು. ಏನೆಲ್ಲಾ ತೊಂದರೆ ಆಗುತ್ತಿದೆ ಅದಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.