ಬೆಂಗಳೂರು:
ಡ್ರಗ್ಸ್ ಜಾಲ ಸಂಬಂಧ ನಿನ್ನೆ ಬಂಧನಕ್ಕೊಳಗಾಗಿರುವ ಕೇರಳದ ಮಾಜಿ ಸಚಿವ ಮತ್ತು ಸಿಪಿಐ(ಎಂ) ಮುಖಂಡ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಆತ ಹಲವು ಮಹತ್ವದ ವಿಷಯಗಳನ್ನು ಅಧಿಕಾರಿಗಳಿಗೆ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಶಾಂತಿನಗರ ಬಳಿ ಇರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಬಿನೇಶ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಇಡಿ ಅಧಿಕಾರಿಗಳು ಬಿನೇಶ್, ಬ್ಯಾಂಕ್ ಖಾತೆ ವಿವರ, ಹಣಕಾಸು ವಹಿವಾಟು ಸೇರಿ ಫೋನ್ ಕರೆಗಳ ಕುರಿತು ಮಾಹಿತಿ ಕಲೆಹಾಕಿದ್ದು ಈ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.