ಬಿಬಿಎಂಪಿ ಕೇಂದ್ರ ಕಚೇರಿಯ ಲ್ಯಾಂಬ್ ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎಇ ಶಿವಕುಮಾರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯ ಲ್ಯಾಂಬ್ ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎಇ ಶಿವಕುಮಾರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಅಗ್ನಿ ಅವಘಡದ ವೇಳೆ ರಾಸಾಯನಿಕ ಗಾಳಿ ಉಸಿರಾಡಿದ ಪರಿಣಾಮ ತೀವ್ರತರ ಉಸಿರಾಟ ಸಮಸ್ಯೆಯಿಂದ ಶಿವಕುಮಾರ್ ಬಳಲುತ್ತಿದ್ದು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಸಂಜೆ ಅವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಬಿಬಿಎಂಪಿ ಅಗ್ನಿ ಅವಘಡ: ಮುಖ್ಯ ಇಂಜಿನಿಯರ್ ಸ್ಥಿತಿ ಗಂಭೀರ, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು
ಆಗಸ್ಟ್ 11ರಂದು ಸಂಜೆ 5 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು ಬಿಬಿಎಂಪಿ ಏಳು ಸಿಬ್ಬಂದಿಗೆ ಸುಟ್ಟಗಾಯಗಳಾಗಿತ್ತು.