Home ನಗರ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ವಿತರಿಸಿದ ಆರ್‌.ಅಶೋಕ್‌

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ವಿತರಿಸಿದ ಆರ್‌.ಅಶೋಕ್‌

50
0

ಬೆಂಗಳೂರು:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಶುಕ್ರವಾರ ಸುರಿದ ಧಾರಾಕಾರ ಮಳೆಯಿಂದ‌ ಹೊಸಕೆರೆ ವಾರ್ಡ್ ನ ದತ್ತಾತ್ರೇಯ ನಗರ ವ್ಯಾಪ್ತಿಯ ಪ್ರವಾಹ ಪೀಡಿತ ಕುಟುಂಬಗಳಿಗೆ ಕಂದಾಯ ಸಚಿವ ಆರ್.ಅಶೋಕ ಹಾಗೂ ಪಾಲಿಕೆ ಆಡಳಿತಾಧಿಕಾರಿ ಗೌರವ ಗುಪ್ತ ತಲಾ 25 ಸಾವಿರ ರೂ. ಪರಿಹಾರದ ಚೆಕ್‌ ವಿತರಿಸಿದರು.


ಮಳೆಯಿಂದ ಹಾನಿಗೊಳಗಾದ 344 ಮನೆಗಳನ್ನು ಗುರುತಿಸಿ ಪರಿಹಾರ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಆರ್‌.ಅಶೋಕ್‌, ಮೂರು ದಿನಗಳಿಂದ ದತ್ತಾತ್ರೇಯ ಬಡಾವಣೆಯಲ್ಲಿ 304 ಕುಟುಂಬಗಳಿಗೆ ಹಾಗೂ ಕುಮಾರಸ್ವಾಮಿ ಬಡಾವಣೆಯ 40 ಕುಟುಂಬಗಳಿಗೆ ಪರಿಹಾರ ವಿತರಣೆ ಮಾಡಲಾಗಿದೆ ಎಂದರು.

LEAVE A REPLY

Please enter your comment!
Please enter your name here