Home Uncategorized ಬಿಲ್ ಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಪ್ರಯೋಜನ ಪಡೆಯಬಹುದು: ಬೆಸ್ಕಾಂ

ಬಿಲ್ ಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಪ್ರಯೋಜನ ಪಡೆಯಬಹುದು: ಬೆಸ್ಕಾಂ

17
0

ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರು: ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಸೆಪ್ಟೆಂಬರ್​ 30ರೊಳಗೆ ವಿದ್ಯುತ್​ ಬಾಕಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಜುಲೈ 25ರೊಳಗೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಆಗಸ್ಟ್​​ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ಹೇಳಿದೆ.

ಜುಲೈ 25ರಿಂದ ಆಗಸ್ಟ್​​ 25ರೊಳಗೆ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಸೆಪ್ಟೆಂಬರ್ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ. ಯೋಜನೆಗೆ ಅರ್ಹರಾಗಲು ಸರಾಸರಿ 200 ಯೂನಿಟ್ ಮೀರಬಾರದು ಎಂದು ತಿಳಿಸಿದೆ.

ಗೃಹ ಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25 ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್​ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ, ಯೋಜನೆಯ ಪ್ರಯೋಜನವನ್ನು ಅವರು, ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಲಿದ್ದಾರೆ. ಯೋಜನೆಯ ನೋಂದಣಿಗೆ ವಿಳಂಬ ಬೇಡ. ಇಂದೇ ನೋಂದಾಯಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದೆ.

LEAVE A REPLY

Please enter your comment!
Please enter your name here