ಬೆಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ನಿಗೂಢ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರು: ಬೆಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ನಿಗೂಢ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಂಗಳೂರಿನ ವೈಟ್ ಫೀಲ್ಡ್ ಠಾಣಾ ವ್ಯಾಫ್ತಿಯಲ್ಲಿ ಜೂನ್ 6 ರ ರಾತ್ರಿ 11.30 ಕ್ಕೆ ಕಟ್ಟಡ ಕಾಮಗಾರಿ ವೇಳೆ ನಿಗೂಢ ವಸ್ತು ಸ್ಪೋಟಗೊಂಡಿದ್ದು, ಘಟನೆಯಲ್ಲಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮೂವರ ಪೈಕಿ ಇಬ್ಬರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಸದ್ಯ ಘಟನೆಯಲ್ಲಿ ಗಾಯಗೊಂಡ ಶ್ರೀನಿವಾಸ್, ಮಣಿಕಂಠನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಫೋಟದ ಬಳಿಕ ಆರೋಪಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಬೆಂಗಳೂರು: ಚಿಂದಿ ಆಯುವವರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ
ಸ್ಫೋಟದ ರಭಸಕ್ಕೆ ಇಬ್ಬರು ಕಾರ್ಮಿಕರ ಕಣ್ಣು, ಕಿವಿ, ಬಾಯಿ, ಮೂಗು ಸೇರಿ ಹಲವೆಡೆ ಸುಟ್ಟ ಗಾಯಗಳಾಗಿವೆ. ಇದೀಗ ಗಾಯಾಳು ಕೂಲಿ ಕಾರ್ಮಿಕ ಕುಟುಂಬದವರು ಖಾಸಗಿ ಆಸ್ಪತ್ರೆ ಬಳಿ ಆಸ್ಪತ್ರೆ ಬಿಲ್ ಪಾವತಿಸಲು ಪರದಾಡುತ್ತಿದ್ದು, ದಿಕ್ಕುಕಾಣದೆ ಕಂಗಲಾಗಿ ಕಣ್ಣೀರಿಡುತ್ತಿದ್ದಾರೆ. ಘಟನೆ ಸಂಬಂಧ ವೈಟ್ ಫೀಲ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಶಾಲ್ ಅರ್ಥ ಮೂವರ್ಸ್ನ ಮಂಜುನಾಥ್ ರೆಡ್ಡಿ, ಕುಶಾಲ್ ರೆಡ್ಡಿ, ಪ್ರಭು, ಲೋಕೇಶ್, ವಿಕ್ರಮ್ ಮರ್ಲ, ಅಶೋಕ್ ಶೆಟ್ಟಿ, ಸಾಕೇತ್ ವಿರುದ್ಧ ದೂರು ದಾಖಲಾಗಿದೆ.
ಗಾಯಾಳು ಶ್ರೀನಿವಾಸ್ ಪತ್ನಿ ಕಲ್ಯಾಣಿ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ. ಸದ್ಯ 8 ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ.