Home ನಗರ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ; ವಾಹನ ಸವಾರರ ಪರದಾಟ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ; ವಾಹನ ಸವಾರರ ಪರದಾಟ

68
0

ಬೆಂಗಳೂರು:

ಬೆಂಗಳೂರು ನಗರದಲ್ಲಿ ಶುಕ್ರವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.

bangalore rains6 640x480 1

ವಿಧಾನಸೌಧ, ಕೆ.ಆರ್.ವೃತ್ತ, ಶಿವಾಜಿನಗರ, ಲಾಲ್ ಬಾಗ್ ರಸ್ತೆ, ಕೆಂಗಲ್ ಹನುಮಂತಯ್ಯ ರಸ್ತೆ, ಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್, ಸಿಟಿ ಮಾರುಕಟ್ಟೆ, ಹೆಬ್ಬಾಳ, ಎಚ್ ಎಎಲ್ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ.

ಸಂಜೆಯಾಗುತ್ತಿದ್ದಂತೆ ಗುಡುಗು ಸಹಿತ ಮಳೆ ಸುರಿಯುತು. ಲಾಲ್ ಬಾಗ್ ರಸ್ತೆಯಲ್ಲಿ ನೀರು ಹೊಳೆಯಂತೆ ಹರಿದ ಪರಿಣಾಮ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು. ಅದರಲ್ಲೂ ದ್ವಿಚಕ್ರ ವಾಹನ ಸವಾರರು ತೀವ್ರ ಸಂಕಷ್ಟಕ್ಕೆ ಗುರಿಯಾಗಬೇಕಾಯಿತು.

LEAVE A REPLY

Please enter your comment!
Please enter your name here