Home Uncategorized ಬೆಂಗಳೂರಿನಲ್ಲಿ ಜನರ ನಿದ್ದೆಗೆಡಿಸಿದ ಚಿರತೆ ದಾಳಿ; ಶಾಲಾ ಕಾಲೇಜುಗಳಿಗಿಲ್ಲ ರಜೆ, ಇಂದು ಸಹ‌ ಮುಂದುವರೆಯಲಿರುವ ಚೀತಾ...

ಬೆಂಗಳೂರಿನಲ್ಲಿ ಜನರ ನಿದ್ದೆಗೆಡಿಸಿದ ಚಿರತೆ ದಾಳಿ; ಶಾಲಾ ಕಾಲೇಜುಗಳಿಗಿಲ್ಲ ರಜೆ, ಇಂದು ಸಹ‌ ಮುಂದುವರೆಯಲಿರುವ ಚೀತಾ ಕೂಂಬಿಂಗ್

2
0
bengaluru

ಬೆಂಗಳೂರು: ನಿನ್ನೆ ತುರಹಳ್ಳಿ ಬಳಿ ಜಿಂಕೆಯನ್ನ ಬೇಟೆಯಾಡಿರುವ ಚಿರತೆ (Leopard hunting deer)ಯ ವಿಡಿಯೋ ವೈರಲ್ (Viral video) ಆದ ನಂತರ ಜನರು ಭಯಭೀತರಾಗಿದ್ದಾರೆ. ಕೆಂಗೇರಿ ಸಮೀಪದ ಕೋಡಿಪಾಳ್ಯ, ಚಟ್ಟಿಪಾಳ್ಯ ನಿವಾಸಿಗಳಲ್ಲಿ ಭೀತಿ ಹೆಚ್ಚಿಸಿದೆ. ತುರಹಳ್ಳಿ ಗ್ರಾಮಕ್ಕೆ ಹೊಂದಿಕೊಂಡು ಕಗ್ಗಲೀಪುರ-ತುರಹಳ್ಳಿ ಅರಣ್ಯ ಪ್ರದೇಶವಿದ್ದು, ಸೋಂಪುರ, ಶ್ರೀನಿವಾಸಪುರ, ಆರ್​.ಆರ್​.ನಗರ, ಮೈಲಸಂದ್ರ, ಕೋಡಿಪಾಳ್ಯ, ಗೆಟ್ಟಿಗರಹಳ್ಳಿಯನ್ನ ಸುತ್ತುವರಿದಿದೆ. ಈ ಅರಣ್ಯ ಪ್ರದೇಶವು 514.26 ಎರಕೆ ವಿಸ್ತೀರ್ಣದಲ್ಲಿದೆ. ಐಟಿಸಿ ಪ್ಯಾಕ್ಟರಿಯಲ್ಲಿ ಚಿರತೆ ಪ್ರತ್ಯಕ್ಷ ಹಿನ್ನೆಲೆ ಇಂದು ಸಹ‌ ಚೀತಾ ಕೂಂಬಿಂಗ್ ಮುಂದುವರೆಯಲಿದೆ. 2 ತಂಡಗಳಿಂದ ಚಿರತೆಯ ಚಲನ ವಲನಗಳ‌ ಮೇಲೆ ನಿಗಾ ಇಡಲಾಗಿದೆ. ಒಬ್ಬೊಬ್ಬರೇ ಓಡಾಡದಂತೆ ಸೂಚನೆ ಅಧಿಕಾರಿಗಳು ಸೂಚನೆ ನೀಡಲಾಗಿದೆ. ಈ ಭೀತಿಯ ನಡುವೆಯೂ ಯಾವುದೇ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿಲ್ಲ. ಅಂಗಡಿ ಮಾಲೀಕರು ಎಂದಿನಂತೆ ವ್ಯಾಪಾರ ವಹಿವಾಟಿನಲ್ಲಿ ತೊಡಗಿಕೊಂಡಿದ್ದಾರೆ. ತುರಹಳ್ಳಿಯಲ್ಲಿ ಚಿರತೆ ದಾಳಿ ನಡೆಸಿದ ರಸ್ತೆಯತ್ತ ಜನರ ಸಂಚಾರ ಸ್ಥಗಿತಗೊಂಡಿದೆ. ಇಡೀ ರಸ್ತೆ ಸಂಪೂರ್ಣ ಖಾಲಿಯಾಗಿದೆ. ಬೆಳ್ಳಂಬೆಳಗ್ಗೆ ವಾಕಿಂಗ್ ಬರುತ್ತಿದ್ದವರೆಲ್ಲಾ ತಡವಾಗಿ ರಸ್ತೆಗೆ ಇಳಿದಿದ್ದಾರೆ. ಇನ್ನೊಂದೆಡೆ ತುರಹಳ್ಳಿ ಪ್ರದೇಶ ಸುತ್ತಲೂ ಸಾಕಷ್ಟು ಬಡವಾಣೆಗಳಿದ್ದು, ಜನವಸತಿ ಪ್ರದೇಶವಾಗಿದೆ. ಇಲ್ಲಿಗೆ ಚಿರತೆ ನುಗ್ಗದಂತೆ ಎಚ್ಚರವಹಿಸುವುದು ಅವಶ್ಯಕವಾಗಿದೆ. ಸಾಧ್ಯವಾದಷ್ಟು ಬೇಗ ಚಿರತೆ ಸೆರೆಹಿಡಿದು ಕಾಡಿಗೆ ಶಿಫ್ಟ್ ಮಾಡಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ತುರಹಳ್ಳಿ ಅರಣ್ಯದೊಳಗೆ ವಾಕಿಂಗ್ ಮಾಡದಂತೆ ಸೂಚನೆ ನೀಡಲಾಗಿದೆ

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

bengaluru

LEAVE A REPLY

Please enter your comment!
Please enter your name here