ರಾಜಧಾನಿ ಬೆಂಗಳೂರಿನ ಅಮೃತಹಳ್ಳಿಯಲ್ಲಿ ಹಾಡುಹಗಲೇ ಜೋಡಿ ಕೊಲೆ ನಡೆದಿದ್ದು, ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ಹಾಗೂ ಎಂಡಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು: ರಾಜಧಾನಿ ಬೆಂಗಳೂರಿನ ಅಮೃತಹಳ್ಳಿಯಲ್ಲಿ ಹಾಡುಹಗಲೇ ಜೋಡಿ ಕೊಲೆ ನಡೆದಿದ್ದು, ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ಹಾಗೂ ಎಂಡಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ವಿನುಕುಮಾರ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಫಣಿಂದ್ರ ಸುಬ್ರಹ್ಮಣ್ಯ ಅವರನ್ನು ತಲ್ವಾರ್ ನಿಂದ ಚುಚ್ಚಿ, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಇದನ್ನು ಓದಿ: ಬೆಂಗಳೂರು: ಚಿಂದಿ ಆಯುವವರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ
ಇಂದು ಸಂಜೆ 4 ಗಂಟೆಯ ಸುಮಾರಿಗೆ ಕಂಪನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಎಂಬಾತ ಈ ಕೃತ್ಯ ಎಸಗಿದ್ದು, ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ….