Home Uncategorized ಬೆಂಗಳೂರಿನಲ್ಲಿ ಬಾಂಗ್ಲಾ ತಂಡವನ್ನು ಮಣಿಸಿ ಹ್ಯಾಟ್ರಿಕ್ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!

ಬೆಂಗಳೂರಿನಲ್ಲಿ ಬಾಂಗ್ಲಾ ತಂಡವನ್ನು ಮಣಿಸಿ ಹ್ಯಾಟ್ರಿಕ್ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!

8
0
Advertisement
bengaluru

ಭಾರತದ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡಗಳು ವಿಶ್ವಕಪ್ (World Cup) ಗೆಲ್ಲಲು ಸಾಧ್ಯವಾಗದಿರಬಹುದು. ಆದರೆ ಭಾರತದ ಪುರುಷ ಅಂಧರ ತಂಡ ಮತ್ತೊಮ್ಮೆ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರೆಸಿದೆ. ಭಾರತದಲ್ಲಿ ನಡೆದ ಮೂರನೇ ಅಂಧರ ಟಿ20 ವಿಶ್ವಕಪ್‌ನಲ್ಲಿ (Blind T20 World Cup) ಭಾರತದ ಅಂಧರ ತಂಡ ಫೈನಲ್‌ನಲ್ಲಿ ಬಾಂಗ್ಲಾದೇಶವನ್ನು (India vs Bangladesh) 120 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಈ ಗೆಲುವಿನ ಮೂಲಕ ಭಾರತ ಈ ಟೂರ್ನಿಯ ಇತಿಹಾಸದಲ್ಲಿ ಹ್ಯಾಟ್ರಿಕ್ ಪ್ರಶಸ್ತಿ ಗೆದ್ದ ದಾಖಲೆ ಮಾಡಿದೆ.

ಡಿಸೆಂಬರ್ 17 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಕೇವಲ 2 ವಿಕೆಟ್‌ಗಳನ್ನು ಕಳೆದುಕೊಂಡು 277 ರನ್‌ಗಳ ಅದ್ಭುತ ಸ್ಕೋರ್ ಗಳಿಸಿತು. ಇದಕ್ಕೆ ಉತ್ತರವಾಗಿ ಇಡೀ ಬಾಂಗ್ಲಾದೇಶ ತಂಡ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 157 ರನ್ ಗಳಿಸಲಷ್ಟೇ ಶಕ್ತವಾಯಿತು.

IND vs BAN: ಬಾಂಗ್ಲಾ ಹುಲಿಗಳ ಮೇಲೆ ಭಾರತದ ಸವಾರಿ; ಟೀಂ ಇಂಡಿಯಾ ಗೆಲುವಿಗೆ 4 ವಿಕೆಟ್ ಬಾಕಿ..!

2. 6 ತಂಡಗಳಲ್ಲಿ ನಂಬರ್ 1 ಟೀಮ್ ಇಂಡಿಯಾ

bengaluru bengaluru

6 ದೇಶಗಳ ನಡುವೆ ಡಿಸೆಂಬರ್ 5 ರಿಂದ ಆರಂಭವಾದ ಈ ಟೂರ್ನಿಯಲ್ಲಿ ಭಾರತ ತಂಡ ಆರಂಭದಿಂದಲೂ ಪ್ರಾಬಲ್ಯ ಮೆರೆದಿತ್ತು. ಲೀಗ್ ಸುತ್ತಿನ ಪಂದ್ಯಗಳಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿತ್ತು. ಸೆಮಿಫೈನಲ್‌ನಲ್ಲಿ ಭಾರತ, ದಕ್ಷಿಣ ಆಫ್ರಿಕಾವನ್ನು 207 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿತು. ಅದೇ ಸಮಯದಲ್ಲಿ ಬಾಂಗ್ಲಾದೇಶ ಎರಡನೇ ಸೆಮಿಫೈನಲ್‌ನಲ್ಲಿ ಶ್ರೀಲಂಕಾವನ್ನು ಸೋಲಿಸಿ ಪ್ರಶಸ್ತಿ ಸುತ್ತಿಗೆ ಎಂಟ್ರಿಕೊಟ್ಟಿತ್ತು.

#TeamIndia beat Bangladesh by 120 runs & clinched the 3rd #T20WorldCup 2022 pic.twitter.com/Vod0x13fzx

— Doordarshan Sports (@ddsportschannel) December 17, 2022

3. ಹ್ಯಾಟ್ರಿಕ್ ಪ್ರಶಸ್ತಿ ಗೆದ್ದ ಭಾರತ

ಈ ಗೆಲುವಿನೊಂದಿಗೆ ವಿಶ್ವಕಪ್‌ನ ಎಲ್ಲಾ ಮೂರು ಆವೃತ್ತಿಗಳ ಚಾಂಪಿಯನ್ ಆಗುವಲ್ಲಿ ಭಾರತ ಯಶಸ್ವಿಯಾಗಿದೆ. ಮೊದಲನೆಯದಾಗಿ 2012 ರಲ್ಲಿ ಮೊದಲ ಬಾರಿಗೆ ಪಂದ್ಯಾವಳಿಯನ್ನು ಆಯೋಜಿಸಲಾಯಿತು. ಅದರಲ್ಲಿ ಭಾರತ ಚೊಚ್ಚಲ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು. ನಂತರ 2017ರಲ್ಲಿ ನಡೆದ ಎರಡನೇ ಟೂರ್ನಿಯಲ್ಲಿ ಬೆಂಗಳೂರಿನಲ್ಲಿ ನಡೆದ ಫೈನಲ್‌ನಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ಚಾಂಪಿಯನ್ ಆಗಿತ್ತು. ಆಗ ಭಾರತ ಪಾಕಿಸ್ತಾನವನ್ನು ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು. ಇದೀಗ 2022ರಲ್ಲಿ ಭಾರತ ಸತತ ಮೂರನೇ ಬಾರಿಗೆ ಈ ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ


bengaluru

LEAVE A REPLY

Please enter your comment!
Please enter your name here