Home Uncategorized ಬೆಂಗಳೂರಿನಲ್ಲಿ ಭೀಕರ ಅಪಘಾತ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು

ಬೆಂಗಳೂರಿನಲ್ಲಿ ಭೀಕರ ಅಪಘಾತ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು

43
0

ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಬೆಂಗಳೂರು: ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಇದನ್ನು ಓದಿ: ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಕಾರು ಢಿಕ್ಕಿ ಹೊಡೆದು ಪೊಲೀಸ್ ಪೇದೆ ಸಾವು​

ಮೃತ ವಿದ್ಯಾರ್ಥಿನಿಯನ್ನು ಎಂಇಎಸ್ ಕಾಲೇಜ್ ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದಿಶಾ(18) ಎಂದು ಗುರುತಿಸಲಾಗಿದೆ.

ದಿಶಾ ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದು, ತಂದೆ-ಮಗಳು ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಅಪಘಾತದಲ್ಲಿ ಮಗಳು ದಿಶಾ ಸಾವನಪ್ಪಿದ್ದು, ತಂದೆ ಗಾಯಗೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here