Home Uncategorized ಬೆಂಗಳೂರಿನಲ್ಲಿ ಹೆಚ್ಚಿದ ಕೋವಿಡ್ ಆತಂಕ: ದೈನಂದಿನ ಪರೀಕ್ಷೆಗಳ ಸಂಖ್ಯೆ 6,000ಕ್ಕೆ ಹೆಚ್ಚಿಸಲು ಅಧಿಕಾರಿಗಳು ಮುಂದು!

ಬೆಂಗಳೂರಿನಲ್ಲಿ ಹೆಚ್ಚಿದ ಕೋವಿಡ್ ಆತಂಕ: ದೈನಂದಿನ ಪರೀಕ್ಷೆಗಳ ಸಂಖ್ಯೆ 6,000ಕ್ಕೆ ಹೆಚ್ಚಿಸಲು ಅಧಿಕಾರಿಗಳು ಮುಂದು!

10
0
Advertisement
bengaluru

ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ ಕುರಿತ ಆತಂಕ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ದೈನಂದಿನ ಪರೀಕ್ಷೆಗಳ ಸಂಖ್ಯೆಯನ್ನು 6,000ಕ್ಕೆ ಹೆಚ್ಚಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಬೆಂಗಳೂರು: ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ ಕುರಿತ ಆತಂಕ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ದೈನಂದಿನ ಪರೀಕ್ಷೆಗಳ ಸಂಖ್ಯೆಯನ್ನು 6,000ಕ್ಕೆ ಹೆಚ್ಚಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಅಂತರಾಷ್ಟ್ರೀಯ ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ಈ ಹಿಂದೆ 1,000-1,500 ಜನರಿಗೆ ಪರೀಕ್ಷೆ ನಡೆಸಲಾಗುತ್ತಿತ್ತು. ಇದೀಗ ಮಾರ್ಗಸೂಚಿಗಳ ಪ್ರಕಾರ ಪರೀಕ್ಷೆಗಳ ಸಂಖ್ಯೆಯನ್ನು 6,000ಕ್ಕೆ ಹೆಚ್ಚಳ ಮಾಡಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗದಿದ್ದರೆ, ಪರೀಕ್ಷೆಗಳ ಸಂಖ್ಯೆ ಒಂದೇ ಆಗಿರುತ್ತದೆ. ಸಾರ್ವಜನಿಕರು ಯಾವುದೇ ಕೋವಿಡ್ ರೋಗಲಕ್ಷಣಗಳಿಂದ ಬಳಲುತ್ತಿದ್ದರೆ ಪರೀಕ್ಷೆಗೆ ಒಳಗಾಗುವಂತೆ ಅವರು ಮನವಿ ಮಾಡಿದರು.

ಮಾಸ್ಕ್ ಕಡ್ಡಾಯ ಕುರಿತು ಪ್ರತಿಕ್ರಿಯಿಸಿ, ಹೊರಾಂಗಣದಲ್ಲಿ ಮಾಸ್ಕ್ ಧರಿಸುವುದನ್ನು ನಾವು ಕಡ್ಡಾಯ ಮಾಡಿಲ್ಲ. ಹೊಸ ವರ್ಷಾಚರಣೆ ಸಂದರ್ಭದಲ್ಲಿಯೂ ಮಾಡಿರಲಿಲ್ಲ. ಆದರೆ, ಮಾಸ್ಕ್ ಧಾರಣೆಯಿಂದಾಗುವ ಲಾಭಯಗಳ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆಂದು ಹೇಳಿದರು.

bengaluru bengaluru

ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ.ಕೆ.ವಿ ತ್ರಿಲೋಕ್ ಚಂದ್ರ ಮಾತನಾಡಿ, 6,000 ಪರೀಕ್ಷೆಗಳ ಗುರಿಯು ಪ್ರಾಥಮಿಕ ಮತ್ತು ಮಾಧ್ಯಮಿಕ ಸಂಪರ್ಕಗಳು, ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವವರ ಪರಿಸ್ಥಿತಿಗಳ ಇತಿಹಾಸ ಹೊಂದಿರುವ ವ್ಯಕ್ತಿಗಳು ಮತ್ತು ಐಎಲ್ಐ ಮತ್ತು ಸಾರಿ ಪ್ರಕರಣಗಳನ್ನು ಪತ್ತೆಹಚ್ಚುವುದನ್ನು ಒಳಗೊಂಡಿದೆ ಎಂದು ತಿಳಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here