Home Uncategorized ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಭಾರಿ ಅಗ್ನಿ ಅವಘಡ; ಹೊತ್ತಿ ಉರಿದ ಕರ್ಲಾನ್ ಶಾಪ್

ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಭಾರಿ ಅಗ್ನಿ ಅವಘಡ; ಹೊತ್ತಿ ಉರಿದ ಕರ್ಲಾನ್ ಶಾಪ್

24
0

ಬೆಂಗಳೂರಿನ ಸರ್ಜಾಪುರ ರಸ್ತೆಯ ದೊಡ್ಡಕನೇಲಿಯಲ್ಲಿ ಗುರುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲೇ ಕರ್ಲಾನ್ ಹಾಸಿಗೆ ಮಳಿಗೆ ಹೊತ್ತಿ ಉರಿದಿದೆ. ಬೆಂಗಳೂರು: ಬೆಂಗಳೂರಿನ ಸರ್ಜಾಪುರ ರಸ್ತೆಯ ದೊಡ್ಡಕನೇಲಿಯಲ್ಲಿ ಗುರುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲೇ ಕರ್ಲಾನ್ ಹಾಸಿಗೆ ಮಳಿಗೆ ಹೊತ್ತಿ ಉರಿದಿದೆ.

ಕರ್ಲಾನ್ ಶಾಪ್ ನಲ್ಲಿ ಹೊತ್ತಿಕೊಂಡ ಬೆಂಕಿ ಪಕ್ಕದ ಮಳಿಗೆಗಳಿಗೂ ಹರಡಿದ್ದು, ಈ ಮಳಿಗೆಗಳಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಜೀವಹಾನಿಯಾಗಿಲ್ಲ. ಆದರೆ ಕರ್ಲಾನ್ ಮಳಿಗೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.

ಇದನ್ನು ಓದಿ: ಕಬ್ಬನ್ ಪಾರ್ಕ್ ನಲ್ಲಿ ಇದೇ 11 ರಿಂದ ಎರಡು ದಿನ ಮಹಿಳಾ ಕ್ರೀಡಾಹಬ್ಬ- ಸಚಿವ ಡಾ.ನಾರಾಯಣಗೌಡ

ಬೆಂಕಿ ಅವಘಡದ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಗ್ನಿ ಅವಘಡದಿಂದಾಗಿ ಸರ್ಜಾಪುರ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈಲರ್ ಆಗಿದೆ.

ಈ ಬೆಂಕಿ ಅವಘಡಕ್ಕೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Fire accident in Sarjapur road Doddakaneli #SarjapurRoad #Bangaloretraffic #TrafficJam @blrcitytraffic pic.twitter.com/igrtfYDLuC
— ChanakyaVishnuDatta (@ChanakyaDatta) March 9, 2023

LEAVE A REPLY

Please enter your comment!
Please enter your name here