Home Uncategorized ಬೆಂಗಳೂರು: ಎಚ್ ಎಸ್ ಆರ್ ಲೇಔಟ್ ನಲ್ಲಿ ಮರಕ್ಕೆ ಕಾರು ಡಿಕ್ಕಿ, ಇಬ್ಬರ ಸಾವು

ಬೆಂಗಳೂರು: ಎಚ್ ಎಸ್ ಆರ್ ಲೇಔಟ್ ನಲ್ಲಿ ಮರಕ್ಕೆ ಕಾರು ಡಿಕ್ಕಿ, ಇಬ್ಬರ ಸಾವು

23
0

ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಹಿರಿಯ ನಾಗರಿಕರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ  ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಭಾನುವಾರ ಮುಂಜಾನೆ  ನಡೆದಿದೆ.  ಬೆಂಗಳೂರು: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಹಿರಿಯ ನಾಗರಿಕರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ  ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಭಾನುವಾರ ಮುಂಜಾನೆ  ನಡೆದಿದೆ. 

ಚಿಕ್ಕಲಸಂದ್ರದ ನಿವಾಸಿ ಕೃಷ್ಣಮೂರ್ತಿ (65) ಮತ್ತು ಬಸವನಗುಡಿಯ ಪ್ರಕಾಶ್ ಹೆಬ್ಬಾರ್ (60) ಮೃತರು. ಅವರ ಸ್ನೇಹಿತರಾದ ವೆಂಕಟೇಶ್ ಮತ್ತು ಸಮೀರ್ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಸ್ನೇಹಿತರು ತಿರುಪತಿಗೆ ಹೋಗಿ ಮನೆಗೆ ಮರಳುತ್ತಿದ್ದ ವೇಳೆ ಎಚ್‌ಎಸ್‌ಆರ್ ಲೇಔಟ್ 14ನೇ ಮುಖ್ಯರಸ್ತೆಯಲ್ಲಿ  ವಾಹನದ ನಿಯಂತ್ರಣ ಕಳೆದುಕೊಂಡು ವೆಂಕಟೇಶ್ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃಷ್ಣಮೂರ್ತಿ ಸ್ಥಳದಲ್ಲೇ ಮೃತಪಟ್ಟರೆ, ಹೆಬ್ಬಾರ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ. ಈ ಸಂಬಂಧ ಎಚ್‌ಎಸ್‌ಆರ್ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here