ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ನೃತ್ಯ ಶಿಕ್ಷಕ ಸೇರಿದಂತೆ ಮೂವರನ್ನು ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ನೃತ್ಯ ಶಿಕ್ಷಕ ಸೇರಿದಂತೆ ಮೂವರನ್ನು ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಖಾಸಗಿ ಶಾಲೆಯ ನೃತ್ಯ ಶಿಕ್ಷಕ ಆಂಡಿ ಜಾರ್ಜ್, ಸಂತೋಷ್ ಮತ್ತು ಶಶಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆಂಡಿ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಸಾಮಾಜಿಕ ಮಾಧ್ಯಮದ ಮೂಲಕ ಸ್ನೇಹ ಬೆಳೆಸಿದ್ದಾನೆ.
ನಂತರ ಆಕೆಯ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡಿ ನಂತರ ಬೆದರಿಕೆ ಹಾಕಲು ಪ್ರಾರಂಭಿಸಿದ್ದಾನೆ. ಆರೋಪಿಯ ಬಗ್ಗೆ ಇದ್ದ ಅನುಮಾನ ಮತ್ತು ಭಯದಿಂದ ವಿದ್ಯಾರ್ಥಿನಿ ಆತನಿಂದ ದೂರವಾಗಿದ್ದಳು. ಬಳಿಕ ತನ್ನ ಬಳಿಯಿದ್ದ ಖಾಸಗಿ ಚಿತ್ರಗಳನ್ನು ಹಂಚಿಕೊಳ್ಳುವುದಾಗಿ ಬ್ಲ್ಯಾಕ್ ಮೇಲ್ ಮಾಡಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಇದನ್ನೂ ಓದಿ: ಭಯೋತ್ಪಾದಕ ಕೃತ್ಯಕ್ಕೆ ಸಂಚು: ಶಂಕಿತ ಉಗ್ರರಿಗೆ ಗ್ರೆನೇಡ್ ಬಳಕೆಯೇ ತಿಳಿದಿರಲಿಲ್ಲ; ಪೊಲೀಸರು
ಅತ್ಯಾಚಾರ ಕೃತ್ಯವನ್ನು ರೆಕಾರ್ಡ್ ಮಾಡಿಕೊಂಡಿದ್ದ ಆತ, ಈ ದೃಶ್ಯಾವಳಿಯನ್ನು ಬಳಸಿಕೊಂಡು ಆಕೆಯನ್ನು ಬ್ಲಾಕ್‌ಮೇಲ್ ಮಾಡುವುದನ್ನು ಮುಂದುವರೆಸಿದ್ದ ಮತ್ತು ಪದೇ ಪದೇ ಅತ್ಯಾಚಾರ ಎಸಗುತ್ತಿದ್ದ.
ಆರೋಪಿ ತನ್ನ ಸ್ನೇಹಿತರನ್ನು ಮನೆಗೆ ಕರೆಸಿಕೊಂಡು ತನ್ನ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿಯು ಆಕೆಯ ಚಿತ್ರಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ. ಸಂತ್ರಸ್ತೆ ಧೈರ್ಯ ಮಾಡಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಇದನ್ನೂ ಓದಿ: ಬೆಂಗಳೂರು: 4 ಕೋಟಿ ವಿಮೆ ಪಡೆಯಲು ದರೋಡೆ ನಾಟಕ ಮಾಡಿದ್ದ ಆಭರಣ ವ್ಯಾಪಾರಿ ಬಂಧನ!
ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ಮೊಬೈಲ್ ಫೋನ್ ಮತ್ತು ಪೆನ್ ಡ್ರೈವ್ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಅದರಲ್ಲೂ ಪ್ರಮುಖ ಆರೋಪಿ ಆಂಡಿ ಇದೇ ರೀತಿಯ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ತನಿಖೆ ಆರಂಭಿಸಿದ್ದಾರೆ.