Home Uncategorized ಬೆಂಗಳೂರು: ಕುಡಿದ ಮತ್ತಿನಲ್ಲಿ ಅಟ್ಟಾಡಿಸಿಕೊಂಡು ಹೋಗಿ ವೈದ್ಯರ ಮೇಲೆ ಹಲ್ಲೆ; ಶೌಚಾಲಯದಲ್ಲಿ ಅವಿತು ಕುಳಿತ ಡಾಕ್ಟರ್!

ಬೆಂಗಳೂರು: ಕುಡಿದ ಮತ್ತಿನಲ್ಲಿ ಅಟ್ಟಾಡಿಸಿಕೊಂಡು ಹೋಗಿ ವೈದ್ಯರ ಮೇಲೆ ಹಲ್ಲೆ; ಶೌಚಾಲಯದಲ್ಲಿ ಅವಿತು ಕುಳಿತ ಡಾಕ್ಟರ್!

7
0
Advertisement
bengaluru

ಕುಡಿದ ಮತ್ತಿನಲ್ಲಿದ್ದ ಇಬ್ಬರು ವ್ಯಕ್ತಿಗಳು ವೈದ್ಯರ ಮೇಲೆ  ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಬೆಂಗಳೂರು: ಕುಡಿದ ಮತ್ತಿನಲ್ಲಿದ್ದ ಇಬ್ಬರು ವ್ಯಕ್ತಿಗಳು ವೈದ್ಯರ ಮೇಲೆ  ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಹೊಂಗಸಂದ್ರದ ಬೇಗೂರು ಮುಖ್ಯರಸ್ತೆಯಲ್ಲಿರುವ ಸೋನು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ 29 ವರ್ಷದ ಡಾ.ಜಮಾಲ್ ಹುಸೇನ್ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗಳಿಂದ ರಕ್ಷಿಸಿಕೊಳ್ಳಲು ಅವರು ವಾರ್ಡ್ ಶೌಚಾಲಯದೊಳಗೆ ಓಡಬೇಕಾಯಿತು. ಸೋಮವಾರ ಮಧ್ಯಾಹ್ನ 1.50ರಿಂದ 1.55ರ ನಡುವೆ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾಗ ಈ ಘಟನೆ ನಡೆದಿದೆ.

ಆರೋಪಿಗಳಲ್ಲಿ ಒಬ್ಬನ ತಾಯಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು, ಆದರೆ ತನ್ನ ತಾಯಿಯ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಕಾರಣ ಹತಾಶೆಗೊಂಡಿದ್ದ, ಹೀಗಾಗಿ  ವೈದ್ಯರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಡಾ. ಹುಸೇನ್ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ರ‍್ಯಾಪಿಡೋ ಬೈಕ್ ಸವಾರರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

bengaluru bengaluru

ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ. ಹೊಂಗಸಂದ್ರದ ಮುನಿರೆಡ್ಡಿ ಲೇಔಟ್ ನಿವಾಸಿ ಹುಸೇನ್ ಕಳೆದ ಆರು ತಿಂಗಳಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಯು ವೈದ್ಯರು ಎಲ್ಲಿ ಎಂದು ಕೇಳುತ್ತಾ ವಾರ್ಡ್‌ಗೆ ಪ್ರವೇಶಿಸಿದ್ದಾನೆ.

ಆರೋಪಿಗಳಲ್ಲಿ ಒಬ್ಬಾತ ತನ್ನ ತಾಯಿ ವಾಣಿಶ್ರೀ ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದ. ಆರೋಪಿಗಳು ವೈದ್ಯರ ಪ್ರಿಸ್ಕ್ರಿಪ್ಷನ್ ಪ್ರತಿಯನ್ನು ಡಾ.ಹುಸೇನ್‌ಗೆ ತೋರಿಸುವ ನೆಪದಲ್ಲಿ ಬಂದರು. ಒಬ್ಬ ಹಲ್ಲೆ ಮಾಡಲು ಆರಂಭಿಸಿದ. ಇನ್ನೊಬ್ಬ ಆರೋಪಿ ಚಾಕು ಹೊರತೆಗೆದು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾನೆ. ತಪ್ಪಿಸಿಕೊಳ್ಳಲು, ವೈದ್ಯರು ವಾರ್ಡ್‌ನೊಳಗಿನ ಶೌಚಾಲಯದ ಕಡೆಗೆ ಓಡಲು ಪ್ರಾರಂಭಿಸಿದರು.

ಆರೋಪಿಗಳು ಅವರನ್ನು ಹಿಂಬಾಲಿಸಿ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದಾರೆ. ಕ್ಷಣಾರ್ಧದಲ್ಲಿ, ವೈದ್ಯರು ಶೌಚಾಲಯಕ್ಕೆಹೋಗಿ ಬಾಗಿಲು ಲಾಕ್ ಮಾಡಿಕೊಂಡಿದ್ದಾರೆ. ಈ ಗದ್ದಲ ಕೇಳಿದ ಇತರ ಸಿಬ್ಬಂದಿ ವೈದ್ಯರ ರಕ್ಷಣೆಗೆ ಬಂದರು ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹಾರ್ನ್ ಮಾಡಿದ್ದಕ್ಕೆ ಕಾರು ಚಾಲಕನ ಮೇಲೆ ಹಲ್ಲೆ; ಮೂವರು ಬೈಕ್ ಸವಾರರ ಬಂಧನ

ಅವರನ್ನು ಸಂಪರ್ಕಿಸಿದಾಗ, ಘಟನೆಯ ಬಗ್ಗೆ ವೈದ್ಯರಾಗಲೀ ಅಥವಾ ಆಸ್ಪತ್ರೆಯಾಗಲೀ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಮದ್ಯದ ಅಮಲಿನಲ್ಲಿದ್ದರು ಎಂದು ತಿಳಿದು ಬಂದಿದೆ.

ವೈದ್ಯರು ಚಿಕಿತ್ಸೆ ಪಡೆಯುತ್ತಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ತನಿಖಾ ತಂಡದಲ್ಲಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳಿಬ್ಬರ ವಿರುದ್ಧ ಕೊಲೆ ಯತ್ನ (ಐಪಿಸಿ 307), ಮೆಡಿಕೇರ್ ಸೇವಾ ಸಿಬ್ಬಂದಿ ವಿರುದ್ಧ ಕರ್ನಾಟಕ ನಿಷೇಧ ಮತ್ತು ಮೆಡಿಕೇರ್ ಸೇವಾ ಸಂಸ್ಥೆಗಳ ಆಸ್ತಿ ಹಾನಿ ಕಾಯ್ದೆ 2009 ರ  ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ಬೊಮ್ಮನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


bengaluru

LEAVE A REPLY

Please enter your comment!
Please enter your name here