Home Uncategorized ಬೆಂಗಳೂರು: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಫೈನಾನ್ಷಿಯರ್ ಹತ್ಯೆ!

ಬೆಂಗಳೂರು: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಫೈನಾನ್ಷಿಯರ್ ಹತ್ಯೆ!

13
0
bengaluru

ಕೊಟ್ಟ ಸಾಲ ವಾಪಸ್ ಕೇಳಿದ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಮಂಗಳವಾರ ತಡರಾತ್ರಿ ಬಾಣಸವಾಡಿ ಠಾಣಾ ವ್ಯಾಪ್ತಿಯ ಚಿಕ್ಕ ಬಾಣಸವಾಡಿ ಬಳಿ ನಡೆದಿದೆ. ಬೆಂಗಳೂರು: ಕೊಟ್ಟ ಸಾಲ ವಾಪಸ್ ಕೇಳಿದ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಮಂಗಳವಾರ ತಡರಾತ್ರಿ ಬಾಣಸವಾಡಿ ಠಾಣಾ ವ್ಯಾಪ್ತಿಯ ಚಿಕ್ಕ ಬಾಣಸವಾಡಿ ಬಳಿ ನಡೆದಿದೆ.

ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಶೇಖರ್ (29) ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಬಾಣಸವಾಡಿ ಸುತ್ತಮುತ್ತ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಶೇಖರ್ ಈ ಹಿಂದೆ ಮನೋಜ್ ಎಂಬಾತನಿಗೆ ಹಣ ನೀಡಿದ್ದನೆಂದು ತಿಳಿದುಬಂದಿದೆ.

ತಡರಾತ್ರಿ ಕುಡಿದ ಅಮಲಿನಲ್ಲಿ ಬಂದ ಶೇಖರ್, ಮನೋಜ್ ಬಳಿ ಕೊಟ್ಟ ಹಣ ವಾಪಾಸ್ ಕೊಡುವಂತೆ ಕೇಳಿದ್ದಾನೆ‌. ಸ್ನೇಹಿತರ ಜತೆ ಬಂದಿದ್ದ ಮನೋಜ್ ‘ಸಾಲ ವಾಪಸ್ ಕೊಡಲ್ಲ, ಏನ್ ಮಾಡ್ಕೊತಿಯೋ ಮಾಡ್ಕೋ’ ಎಂದು ಶೇಖರ್ ಬಳಿ ಗಲಾಟೆ ಆರಂಭಿಸಿದ್ದ. ಈ ವೇಳೆ ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಮನೋಜ್ ಹಾಗೂ ಆತನ ಸ್ನೇಹಿತರು ಶೇಖರ್​​ನ ಹೊಟ್ಟೆ ಭಾಗಕ್ಕೆ ಮೂರ್ನಾಲ್ಕು ಕಡೆಗಳಲ್ಲಿ ಚಾಕುವಿನಿಂದ ಇರಿದಿದ್ದಾರೆ.

ಈ ವೇಳೆ ತೀವ್ರ ರಕ್ತಸ್ರಾವದಿಂದ ಶೇಖರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಮೃತ ದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಬಾಣಸವಾಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮನೋಜ್ ಹಾಗೂ ಆತನ ಸ್ನೇಹಿತರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here