ಕ್ಯಾಂಟರ್ ಹರಿದು ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಬೆಂಗಳೂರು: ಕ್ಯಾಂಟರ್ ಹರಿದು ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಬಿಹಾರ ಮೂಲದ ಆಶಿಶ್ (28) ಮತ್ತು ತಮಿಳುನಾಡಿನ ಮನೋಜ್ ಕುಮಾರ್ (30) ಎಂದು ಗುರುತಿಸಲಾಗಿದೆ.
ಮೃತರು ಹೊರ ರಾಜ್ಯದಿಂದ ಬಂದು ದಿನಗೂಲಿ ಆಧಾರದ ಮೇಲೆ ಬಯೋಕಾನ್ ನಲ್ಲಿ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಊಟಕ್ಕೆ ಹೊರಗೆ ಬಂದು ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದರು. ಹಣ್ಣಿನ ಮಾರುಕಟ್ಟೆಯಿಂದ ಲೋಡ್ ಮಾಡಿಕೊಂಡು ಅತಿ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಚಾಲಕ ಹಾಗೂ ವಾಹನವನ್ನು ವಶಕ್ಕೆ ಪಡೆದ ಹೆಬ್ಬಗೋಡಿ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.