Home Uncategorized ಬೆಂಗಳೂರು: ಖ್ಯಾತ ವಕೀಲ ಸಿ.ವಿ.ನಾಗೇಶ್ ಪುತ್ರ ಅರುಣ್ ಅವಧಾನಿ ಹೃದಯಾಘಾತದಿಂದ ನಿಧನ

ಬೆಂಗಳೂರು: ಖ್ಯಾತ ವಕೀಲ ಸಿ.ವಿ.ನಾಗೇಶ್ ಪುತ್ರ ಅರುಣ್ ಅವಧಾನಿ ಹೃದಯಾಘಾತದಿಂದ ನಿಧನ

7
0
Advertisement
bengaluru

ಹೈಕೋರ್ಟ್‌ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರ ಪುತ್ರ ಅರುಣ್ ಅವಧಾನಿ (41)  ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರುಣ್ ಅವಧಾನಿ ಪತ್ನಿ, ಪುತ್ರ ಸೇರಿ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ. ಬೆಂಗಳೂರು: ಹೈಕೋರ್ಟ್‌ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರ ಪುತ್ರ ಅರುಣ್ ಅವಧಾನಿ (41)  ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರುಣ್ ಅವಧಾನಿ ಪತ್ನಿ, ಪುತ್ರ ಸೇರಿ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

ಭಾನುವಾರ ಊಟಿಯಲ್ಲಿ ತಂಗಿದ್ದ ಇವರು ತಡರಾತ್ರಿ ವಾಂತಿ-ತಲೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅರುಣ್ ಅವಧಾನಿ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಅವರ ಪಾರ್ಥಿವ ಶರೀರವನ್ನು ಊಟಿಯಿಂದ ಬೆಂಗಳೂರಿಗೆ ತರಲಾಗಿದೆ.

‘ಅರುಣ್ ಅವರಿಗೆ ಇಬ್ಬರು ಸಹೋದರಿಯರಿದ್ದು ಒಬ್ಬರು ಅಮೆರಿಕ ಮತ್ತೊಬ್ಬರು ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಅಂತ್ಯಕ್ರಿಯೆ ನಾಳೆ (ಮಂಗಳವಾರ) ಸಂಜೆ ಅಥವಾ ನಾಡಿದ್ದು (ಬುಧವಾರ) ನಡೆಯಲಿದೆ. ಅಲ್ಲಿಯವರೆಗೂ ಪಾರ್ಥಿವ ಶರೀರವನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ಇರಿಸಲಾಗುವುದು‘ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.


bengaluru

LEAVE A REPLY

Please enter your comment!
Please enter your name here