Home Uncategorized ಬೆಂಗಳೂರು: ಚಾಕುವಿನಿಂದ ಇರಿದು ದರೋಡೆ ಮಾಡಿದ್ದ ಇಬ್ಬರು ಕುಖ್ಯಾತ ದರೋಡೆಕೋರರ ಬಂಧನ

ಬೆಂಗಳೂರು: ಚಾಕುವಿನಿಂದ ಇರಿದು ದರೋಡೆ ಮಾಡಿದ್ದ ಇಬ್ಬರು ಕುಖ್ಯಾತ ದರೋಡೆಕೋರರ ಬಂಧನ

32
0

ಫೆಬ್ರುವರಿ 12 ರಂದು ಸುಂಕದಕಟ್ಟೆ ಪ್ರದೇಶದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 26 ವರ್ಷದ ದರೋಡೆಕೋರ ಮತ್ತು ಆತನ ಸಹಚರನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಹಣ ದೋಚುವ ಮುನ್ನ ಆರೋಪಿಗಳು ಸಂತ್ರಸ್ತರಿಗೆ ಚಾಕುವಿನಿಂದ ಇರಿದಿದ್ದರು. ಬೆಂಗಳೂರು: ಫೆಬ್ರುವರಿ 12 ರಂದು ಸುಂಕದಕಟ್ಟೆ ಪ್ರದೇಶದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 26 ವರ್ಷದ ದರೋಡೆಕೋರ ಮತ್ತು ಆತನ ಸಹಚರನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಹಣ ದೋಚುವ ಮುನ್ನ ಆರೋಪಿಗಳು ಸಂತ್ರಸ್ತರಿಗೆ ಚಾಕುವಿನಿಂದ ಇರಿದಿದ್ದರು.

ಆರೋಪಿಗಳಾದ ಕೃಷ್ಣ (26) ಮತ್ತು ನಿರಂಜನ್ (25) ಸುಂಕದಕಟ್ಟೆಯ ಹೊಯ್ಸಳನಗರ ನಿವಾಸಿಗಳಾಗಿದ್ದು, ಮೂಲತಃ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನವರು. ಸಂತ್ರಸ್ತ ಶಿವಣ್ಣ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಆರೋಪಿಗಳು ಚಾಕುವಿನಿಂದ ಇರಿದಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿರುವ ಸಂತ್ರಸ್ತರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರಿಂದ ಸುಮಾರು 1.5 ಲಕ್ಷ ಮೌಲ್ಯದ ಮೂರು ದ್ವಿಚಕ್ರ ವಾಹನಗಳು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ದರೋಡೆ ಮಾಡಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದರು. ದರೋಡೆಗೆ ಬಳಸಿದ್ದ ಮಾರಕಾಸ್ತ್ರವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here