Home Uncategorized ಬೆಂಗಳೂರು: ಡಂಬಲ್ಸ್ ನಿಂದ ನನ್ನ ಹೆಂಡ್ತಿನ ಹೊಡೆದು ಸಾಯ್ಸಿದ್ದೀನಿ ಬೇಗ ಬನ್ನಿ; ಪೊಲೀಸರಿಗೆ ಕರೆ ಮಾಡಿದ...

ಬೆಂಗಳೂರು: ಡಂಬಲ್ಸ್ ನಿಂದ ನನ್ನ ಹೆಂಡ್ತಿನ ಹೊಡೆದು ಸಾಯ್ಸಿದ್ದೀನಿ ಬೇಗ ಬನ್ನಿ; ಪೊಲೀಸರಿಗೆ ಕರೆ ಮಾಡಿದ ಕಿರಾತಕ ಅರೆಸ್ಟ್!

11
0
bengaluru

ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಬೆಂಗಳೂರು: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.

ಕೃತ್ಯವೆಸಗಿದ ಬಳಿಕ ತಾನೇ ಕರೆ ಮಾಡಿ ವಿಷಯ ತಿಳಿಸಿ ರಾಮಮೂರ್ತಿನಗರ ಪೊಲೀಸರ ಮುಂದೆ ಶರಣಾಗಿದ್ದಾನೆ. ಪತ್ನಿ‌ ಲೇದಿಯಾಳನ್ನು ಕೊಲೆ ಮಾಡಿದ ಆರೋಪದಡಿ ಪತಿ ಮೋರಿಸ್ ಎಂಬಾತನನ್ನ ಬಂಧಿಸಿ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ರಾಮಮೂರ್ತಿನಗರದ ಹೊಯ್ಸಳ ಸ್ಟ್ರೀಟ್‌ನಲ್ಲಿ ಎರಡು ಅಂತಸ್ತಿನ ಮನೆಯಲ್ಲಿ ವಾಸವಾಗಿರುವ ಮೋರಿಸ್, 18 ವರ್ಷಗಳ ಹಿಂದೆ ಲೇದಿಯಾಳನ್ನ ಮದುವೆಯಾಗಿದ್ದ. ದಂಪತಿಗೆ ಶಾಲೆಗೆ ಹೋಗುವ ಮೂವರು ಗಂಡು ಮಕ್ಕಳಿದ್ದಾರೆ.

ಪತ್ನಿ ಗೃಹಿಣಿಯಾದರೆ ಪತಿ ಮೊಬೈಲ್‌ ನೆಟ್ ವರ್ಕ್ ಕಂಪನಿಯೊಂದರಲ್ಲಿ ಕೆಲಸ‌ ಮಾಡುತ್ತಿದ್ದ. ಪರಪುರುಷನೊಂದಿಗೆ ಸಂಬಂಧವಿದೆ ಎಂದು‌ ಶಂಕಿಸಿ ಹೆಂಡತಿಯೊಂದಿಗೆ ಆಗಾಗ ಗಲಾಟೆ ಮಾಡುತ್ತಿದ್ದ. ಅದೇ ರೀತಿ ಇಂದು ಬೆಳಗ್ಗೆ ಮಕ್ಕಳು‌ ಶಾಲೆಗೆ ಹೋದ‌‌‌ ಮೇಲೆ ಪತ್ನಿ ಜೊತೆ ಕ್ಯಾತೆ ತೆಗೆದಿದ್ದಾನೆ. ನೋಡು ನೋಡುತ್ತಿದ್ದಂತೆ ಗಲಾಟೆ ತಾರಕ್ಕಕ್ಕೇರಿದೆ. ಮನೆಯಲ್ಲಿದ್ದ ಸುಮಾರು ಎರಡೂವರೆ‌ ಕೆ.ಜಿ ತೂಕದ ಡಂಬಲ್ ನಿಂದ ನಾಲ್ಕು ಬಾರಿ ಪತ್ನಿಯ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು  ಡಿಸಿಪಿ ಭೀಮಾಶಂಕರ ಗುಳೇದ್ ಹೇಳಿದ್ದಾರೆ.

bengaluru

ಕೃತ್ಯವೆಸಗಿದ ಬಳಿಕ ಬೆಳಗ್ಗೆ 10.30ಕ್ಕೆ ಪೊಲೀಸ್ ಕಂಟ್ರೋಲ್‌ ರೂಮ್ ಗೆ ಕರೆ ಮಾಡಿ ಮನೆಯಲ್ಲಿ ಕೌಟುಂಬಿಕ ಕಾರಣಕ್ಕಾಗಿ ಜಗಳ ನಡೆದಿದೆ ಎಂದು ಹೇಳಿದ್ದಾನೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಲೈದಿಯಾಳ ಶವ ಕ್ರೂರವಾಗಿ ಹತ್ಯೆಯಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ‌‌.

ಪ್ರಾಥಮಿಕ ವಿಚಾರಣೆ ವೇಳೆ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

bengaluru

LEAVE A REPLY

Please enter your comment!
Please enter your name here