ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಇಂದು ಕರೆ ನೀಡಿದ್ದ ಬೆಂಗಳೂರು ಬಂದ್ ಎಫೆಕ್ಟ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಪ್ರಯಾಣಿಕರಿಗೂ ತಟ್ಟಿತು. ಕ್ಯಾಬ್ ಇಲ್ಲದೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವಂತಾಯಿತು. ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಇಂದು ಕರೆ ನೀಡಿದ್ದ ಬೆಂಗಳೂರು ಬಂದ್ ಎಫೆಕ್ಟ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಪ್ರಯಾಣಿಕರಿಗೂ ತಟ್ಟಿತು. ಕ್ಯಾಬ್, ಟ್ಯಾಕ್ಸಿ, ಆಟೋ ಇಲ್ಲದೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವಂತಾಯಿತು.
ಇದನ್ನೂ ಓದಿ: ಅಸಾಧ್ಯವಾದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ, ಖಾಸಗಿ ಬಸ್ ಗಳ ನಷ್ಟ ತುಂಬಿಕೊಡಲು ಆಗಲ್ಲ- ಸಿಎಂ ಸಿದ್ದರಾಮಯ್ಯ
ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಕೂಡಾ ವಿಮಾನ ನಿಲ್ದಾಣದಿಂದ ಬಿಎಂಟಿಸಿ ವಾಯುವಜ್ರ ಬಸ್ ನಲ್ಲಿ ಪ್ರಯಾಣಿಸಿದರು. ಈ ಕುರಿತ ಫೋಟೋವೊಂದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಅವರು ಹಂಚಿಕೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಮನೆಗೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣ ಎಂದು ಅವರು ಬರೆದುಕೊಂಡಿದ್ದಾರೆ.
BMTC trip back home today from the airport. pic.twitter.com/jUTfHk1HrE
— Anil Kumble (@anilkumble1074) September 11, 2023