Home Uncategorized ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವು

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವು

21
0

ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವನ್ನಪ್ಪಿದ್ದಾರೆ. ಬೆಂಗಳೂರು: ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವನ್ನಪ್ಪಿದ್ದಾರೆ.

ಸ್ಯಾಂಕಿ ಕೆರೆಯ ಟಿ.ಚೌಡಯ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು ಮೃತನನ್ನು ಜೆ.ಪಿ. ನಗರ ನಿವಾಸಿ 27 ವರ್ಷದ ಪ್ರಶಾಂತ್ ನಾಯಕ್ ಎಂದು ಗುರುತಿಸಲಾಗಿದೆ. 

ಇದನ್ನೂ ಓದಿ: ಮೈಸೂರು: ಪ್ರಧಾನಿ ಮೋದಿ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಪ್ರಹ್ಲಾದ್ ಮೋದಿಗೆ ಗಂಭೀರ ಗಾಯ

ಪ್ರಶಾಂತ್ ನಾಯಕ್ ತೆರಳುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಪುಟ್ ಪಾತ್ ಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ಪ್ರಶಾಂತ್ ನಾಯಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಪ್ರಶಾಂತ್ ನಾಯಕ್ ಸದಾಶಿವನಗರದಿಂದ ಜೆ.ಪಿ.ನಗರಕ್ಕೆ ತೆರಳುತ್ತಿದ್ದರು. ಇನ್ನು ಸದಾಶಿವನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

LEAVE A REPLY

Please enter your comment!
Please enter your name here