Home Uncategorized ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಬೈಕ್, ಆಟೋ ಸೇರಿ ಕೆಲವು ವಾಹನಗಳಿಗೆ ನಿಷೇಧ!

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಬೈಕ್, ಆಟೋ ಸೇರಿ ಕೆಲವು ವಾಹನಗಳಿಗೆ ನಿಷೇಧ!

38
0

ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​​ ವೇನಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೈಕ್, ಆಟೋ ಸೇರಿ ಕೆಲವು ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿಷೇಧ ಏರಿದೆ.  ರಾಮನಗರ: ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​​ ವೇನಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೈಕ್, ಆಟೋ ಸೇರಿ ಕೆಲವು ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿಷೇಧ ಏರಿದೆ. 

ಜುಲೈ 12ರಂದೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೈಕ್, ಆಟೋ, ಟ್ರಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ನಿಷೇಧ ಹೇರಿ ಅಧಿಸೂಚನೆ ಹೊರಡಿಸಲಾಗಿದ್ದು ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​​ ವೇನಲ್ಲಿ ಸಂಚರಿಸುವ ವಾಹನಗಳಿಗೆ ಗಂಟೆಗೆ 80ರಿಂದ 100 ಕಿಲೋಮೀಟರ್​ ವೇಗದ ಮಿತಿ ನಿಗದಿಪಡಿಸಲಾಗಿದೆ. ಇನ್ನು ಜುಲೈ 24ವರೆಗೆ ಎಕ್ಸ್‌ಪ್ರೆಸ್‌ವೇನಲ್ಲಿ ಅತಿವೇಗದ ಚಾಲನೆಗಾಗಿ 2,000ಕ್ಕೂ ಹೆಚ್ಚು ವಾನಹಗಳ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತ ಹೆಚ್ಚಳ ನಿಯಂತ್ರಣಕ್ಕೆ ವಿಶೇಷ ಸಮಿತಿ ರಚಿಸಿದ NHAI

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಚಿಸಿದ ಸುರಕ್ಷತಾ ಸಮಿತಿಯು ಎಕ್ಸ್‌ಪ್ರೆಸ್‌ವೇ ಸುರಕ್ಷತೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸಿತ್ತು. ಮಾರ್ಚ್‌ನಲ್ಲಿ ಲೋಕಾರ್ಪಣೆಯಾದ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ 570ಕ್ಕೂ ಹೆಚ್ಚು ಅಪಘಾತಗಳು ವರದಿಯಾಗಿವೆ. ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here