Home Uncategorized ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಇ-ವೇ ಟೋಲ್ ಸಂಗ್ರಹಕ್ಕೆ ವಿರೋಧ: ಕಾಂಗ್ರೆಸ್ ನಿಂದ ಪ್ರತಿಭಟನೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಇ-ವೇ ಟೋಲ್ ಸಂಗ್ರಹಕ್ಕೆ ವಿರೋಧ: ಕಾಂಗ್ರೆಸ್ ನಿಂದ ಪ್ರತಿಭಟನೆ

27
0

ಬೆಂಗಳೂರು-ಮೈಸೂರು ಹೊಸ ಎಕ್ಸ್‌ಪ್ರೆಸ್‌ವೇ ಯೋಜನೆ ಸಂಪೂರ್ಣ ಸಿದ್ಧಗೊಳ್ಳುವ ಮುನ್ನವೇ ವಾಹನ ಸವಾರರಿಂದ ಟೋಲ್ ಸಂಗ್ರಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.  ಬೆಂಗಳೂರು: ಬೆಂಗಳೂರು-ಮೈಸೂರು ಹೊಸ ಎಕ್ಸ್‌ಪ್ರೆಸ್‌ವೇ ಯೋಜನೆ ಸಂಪೂರ್ಣ ಸಿದ್ಧಗೊಳ್ಳುವ ಮುನ್ನವೇ ವಾಹನ ಸವಾರರಿಂದ ಟೋಲ್ ಸಂಗ್ರಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ. 

ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್,  ಇದು ಹಳೇ ಮೈಸೂರು ಭಾಗದ ಜನರಿಗೆ ಬಿಜೆಪಿ ಯುಗಾದಿ ಉಡುಗೊರೆ ಎಂದು ಟೀಕಿಸಿದರು. ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಕಾಂಗ್ರೆಸ್ ಇದರ ವಿರುದ್ಧ ಪ್ರತಿಭಟನೆ ನಡೆಸಲಿದೆ ಎಂದಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದುವರೆಗೆ ಪಕ್ಷದ ನಾಯಕರು ತಮ್ಮೊಂದಿಗೆ ಚರ್ಚಿಸಿಲ್ಲ. ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಹೇಳಿದರು. ನಾವು ಯಾರ ಬಗ್ಗೆಯೂ ಮೃದು ಧೋರಣೆ ಹೊಂದಿಲ್ಲ. ಕಾಂಗ್ರೆಸ್ ಕ್ಷೇತ್ರವನ್ನು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಈ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆಸಿದ್ದು, ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here