ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಇದನ್ನು ತಡೆಗಟ್ಟಲು ಪೊಲೀಸರು ನಾನಾ ಕಸರತ್ತು ನಡೆಸಿದ್ದಾರೆ. ಇದರ ನಡುವೆಯೇ ಕೆಎಸ್ಆರ್ಟಿಸಿ ಬಸ್ ಚಾಲಕನೊಬ್ಬ ಬಸ್ ನ್ನು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಇದನ್ನು ತಡೆಗಟ್ಟಲು ಪೊಲೀಸರು ನಾನಾ ಕಸರತ್ತು ನಡೆಸಿದ್ದಾರೆ. ಇದರ ನಡುವೆಯೇ ಕೆಎಸ್ಆರ್ಟಿಸಿ ಬಸ್ ಚಾಲಕನೊಬ್ಬ ಬಸ್ ನ್ನು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ರಾಮನಗರ ಜಿಲ್ಲೆಯ ಬಿಡದಿಯ ಶೇಷಗಿರಿ ಟೋಲ್ ಬಳಿ ಕೆಎ–10, ಎಫ್– 0492 ನಂಬರ್‌ನ ಕೆಎಸ್ಆರ್ಟಿಸಿ ಬಸ್ ಒನ್ ವೇನಲ್ಲಿ ಸಂಚರಿಸಿದೆ. 2 ಕಿ.ಮಿ ದೂರದ ವರೆಗೂ ಚಾಲಕ ಡೇಂಜರ್ ಡ್ರೈವ್ ಮಾಡಿದ್ದು, ಆತಂಕ ಸೃಷ್ಟಿದ್ದಾನೆ.
ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.
ವಿಡಿಯೋವನ್ನು ಅಭಿಷೇಕ್ ಎಂಬುವವರು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದು, ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಟ್ಯಾಗ್ ಮಾಡಿದ್ದಾರೆ.
ನಿಯಮಗಳ ಉಲ್ಲಂಘಿಸಲು ಸರಕಾರಿ ವಾಹನಗಳಿಗೆ ಅನುಮತಿಸಲಾಗಿದೆಯೇ? ನಂತರ ಜನರು ಎಕ್ಸ್‌ಪ್ರೆಸ್‌ವೇಯನ್ನು ದೂಷಿಸುವಂತೆ ಮಾಡುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಜು.14ರಂದು ಬೆಳಿಗ್ಗೆ 10.40ರ ಸುಮಾರಿಗೆ ವಿಡಿಯೋವನ್ನು ರೆಕಾರ್ಡ್ ಮಾಡಲಾಗಿದೆ.
ಕಳೆದ ಮಾರ್ಚ್ ತಿಂಗಳಿನಲ್ಲಿ ಇದೇ ರೀತಿಯ ಘಟನೆಯೊಂದು ನಡೆದಿತ್ತು. ಕೆಎಸ್ಆರ್’ಟಿಸಿ ಬಸ್ ವೊಂದು ವಿರುದ್ಧ ದಿಕ್ಕಿನಲ್ಲಿ ಬಂದ ಪರಿಣಾಮ ಅಪಘಾತ ಸಂಭವಿಸಿತ್ತು. ಘಟನೆ ಬಳಿಕ ಸಾರಿಗೆ ನಿಗಮ ಸುತ್ತೋಲೆ ಹೊರಡಿಸಿ, ಎಲ್ಲಾ ಸಿಬ್ಬಂದಿಗಳು ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು. ಇಲ್ಲದಿದ್ದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿತ್ತು.
ಈ ನಡುವೆ ಘಟನೆ ಬಗ್ಗೆ ಗಮನ ಹರಿಸಿರುವ ರಾಮನಗರ ಜಿಲ್ಲಾ ಎಸ್ಪಿ ಕಾರ್ತಿಕ್ ರೆಡ್ಡಿ ನೇತೃತ್ವದ ಪೊಲೀಸರು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಡದಿ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.